BREAKING NEWS

14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆಡಳಿತಕ್ಕೆ ಮತ್ತೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ಸೋಮವಾರ 14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಕಳೆದ ಹಲವು ದಿನಗಳಿಂದ ಆಡಳಿತ ವರ್ಗದಲ್ಲಿ ಹಲವು ಸುಧಾರಣೆಗಳನ್ನು ಮಾಡಲು ಮುಂದಾಗಿರುವ ಸರ್ಕಾರ ಐಎಎಸ್‌ ಹಾಗೂ ಐಪಿಎಸ್ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡುತ್ತಿದೆ. ಈ ಸಂಬಂಧ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಅವುಗಳ ವಿವರ ಇಲ್ಲಿದೆ.

ವರ್ಗಾವಣೆಗೊಂಡಿರುವ ಅಧಿಕಾರಿಗಳು
ಜಾವೇದ್ ಅಖ್ತರ್: ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
ಬಿ.ಸಿ.ಸತೀಶ್: ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ಡಾ.ಹೆಚ್.ಎನ್.ಗೋಪಾಲಕೃಷ್ಣ: ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
ಡಾ.ಎನ್.ಶಿವಶಂಕರ: ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಅಕ್ರಂ ಪಾಷಾ: ಜಿಲ್ಲಾಧಿಕಾರಿ, ಕೋಲಾರ
ಗಂಗೂಬಾಯಿ ರಮೇಶ್ ಮಾನಕರ್: ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
ಆರ್‌.ಲತಾ: ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
ವೆಂಕಟರಾಜು: ಜಿಲ್ಲಾಧಿಕಾರಿ, ಕೊಡಗು
ಫೌಝಿಯಾ ತರನುಮ್: ಜಿಲ್ಲಾಧಿಕಾರಿ, ಕಲಬುರಗಿ
ಎನ್.ಎಂ.ನಾಗರಾಜ್: ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
ಭನ್ವರ್ ಸಿಂಗ್ ಮೀನಾ: ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
ಜಿ.ಲಿಂಗಮೂರ್ತಿ: ವ್ಯವಸ್ಥಾಪಕ ನಿರ್ದೇಶಕ, ಕೆಆರ್​ಡಿಸಿಎಲ್
ಡಾ.ಗಿರೀಶ್ ದಿಲೀಪ್ ಬಾಡೊಲೆ: ಪರೀಕ್ಷಾ ನಿಯಂತ್ರಕ, ಕೆಪಿಎಸ್​ಸಿ
ನೊಂಗ್ಜಾಯ್ ಮೊಹಮ್ಮದ್ ಅಲಿ‌ ಅಕ್ರಂ ಶಾ: ಆಯುಕ್ತ, ಹಂಪಿ‌ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago