ಹೊಸದಿಲ್ಲಿ : ಭಾರತೀಯ ಸೇನಾಪಡೆಗಳಲ್ಲಿ ಅಲ್ಪಾವಧಿಗೆ ಸೇವೆ ಸಲ್ಲಿಸಲು ಯುವಕರಿಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ‘ಅಗ್ನಿಪಥ’ ಯೋಜನೆಯ ಪರವಾಗಿ ದಿಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಫೆ 27 ರಂದು ದಿಲ್ಲಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಗೋಪಾಲ್ ಕೃಷ್ಣ ಮತ್ತು ವಕೀಲ ಎಂ.ಎಲ್. ಶರ್ಮಾ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂಕೋರ್ಟ್ ಪುರಸ್ಕರಿಸಲು ನಿರಾಕರಿಸಿದೆ.
ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾ ಪಿಎಸ್ ನರಸಿಂಹ ಹಾಗೂ ನ್ಯಾ ಜೆಬಿ ಪರ್ದಿವಾಲಾ ಅವರಿದ್ದ ಪೀಠ, ”ಕ್ಷಮಿಸಿ, ನಾವು ಹೈಕೋರ್ಟ್ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಈ ವಿಷಯದಲ್ಲಿ ಹೈಕೋರ್ಟ್ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ತೀರ್ಪು ನೀಡಿದೆ,”ಎಂದು ಹೇಳಿದೆ.
ಆದಾಗ್ಯೂ, ಅಗ್ನಿಪಥ ಯೋಜನೆಯನ್ನು ಪ್ರಾರಂಭಿಸುವ ಮೊದಲು ಭಾರತೀಯ ವಾಯು ಪಡೆಯಲ್ಲಿ (ಐಎಎಫ್) ನೇಮಕಾತಿ ಕುರಿತು ಪ್ರಶ್ನಿಸಲಾದ ಅರ್ಜಿಯನ್ನು ಏ 17 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಅರ್ಜಿದಾರರಿಗೆ ತಿಳಿಸಿದೆ. ಭಾರತೀಯ ವಾಯುಪಡೆಯಲ್ಲಿ ನೇಮಕಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಸೂಕ್ತ ಉತ್ತರ ನೀಡುವಂತೆ ನ್ಯಾಯಪೀಠವು ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ಅಗ್ನಿಪಥ ಯೋಜನೆ ಘೋಷಣೆಗೂ ಮುನ್ನ ಸೇನಾ ನೇಮಕಾತಿ ರಾಲಿಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಗ್ನಿವೀರರಾಗಲು ಹಕ್ಕು ಇರುತ್ತದೆ. ಇದಕ್ಕೆ ಕೇಂದ್ರ ಸರಕಾರ ಅವಕಾಶ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಗಳಲ್ಲಿ ಒತ್ತಾಯಿಸಲಾಗಿತ್ತು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…