ಹುಬ್ಬಳ್ಳಿ : ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಒಳ ಹೊಡೆತ ಮತ್ತು ಹೊರ ಹೊಡೆತ ಎರಡೂ ನಡೆದಿದೆ. ಅಂದರೆ ನನ್ನ ಎದುರಾಳಿ ಬಿಜೆಪಿಗೆ ಯಾವ ರೀತಿ ಶಾಕ್ ಆಗಲಿದೆ ಎನ್ನುವುದು ಫಲಿತಾಂಶದ ದಿನ ಕಾದು ನೋಡಿ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಮಾತಿಗೂ ಕೃತಿಗೂ ಹೊಂದಾಣಿಕೆಯೇ ಇಲ್ಲ. ಇಲ್ಲಿ ನೋಡಿದರೆ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಹೇಳುತ್ತಾರೆ. ಇನ್ನೊಂದು ಕಡೆ ಮೋದಿ ಮುಖ ನೋಡಿ ಮತ ಹಾಕಿ ಎಂದು ಕೇಳುತ್ತಾರೆ. ಬಿಜೆಪಿಯವರಿಗೆ ಪಕ್ಷವೇ ಮುಖ್ಯ ಎನ್ನುವುದಾದರೆ, ವ್ಯಕ್ತಿಯಾಗಿರುವ ಮೋದಿಯವರ ಮುಖ ಯಾಕೆ ಮುಂದೆ ಮಾಡಬೇಕು.
ಒಂದು ವೇಳೆ ಪಕ್ಷವೇ ಮುಖ್ಯವಾದರೆ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಏಕೆ ಗೆಲ್ಲಲಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಯಾವುದೇ ಚುನಾವಣೆ ಇರಲಿ ವೈಯಕ್ತಿಕ ನಾಯಕತ್ವ, ಪಕ್ಷದ ಶಕ್ತಿ ಇದ್ದಾಗ ಮಾತ್ರ ಗೆಲುವು ಸಾಧ್ಯ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ಚುನಾವಣೆಯೇ ಹೊರತು, ಶೆಟ್ಟರ್ ಮತ್ತು ಕೇಂದ್ರ ಸರ್ಕಾರದ ನಡುವಣ ಚುನಾವಣೆಯಲ್ಲ. ಕಾಂಗ್ರೆಸ್ ಅಭ್ಯರ್ಥಿಯಾದ ನಂತರ ದೊಡ್ಡ ಪ್ರಮಾಣದಲ್ಲಿ ನನಗೆ ಜನಬೆಂಬಲ ಸಿಕ್ಕಿದೆ. ದೊಡ್ಡ ಪ್ರಮಾಣದಲ್ಲಿ ಒಳ ಹೊಡೆತ ಆಗಿದೆ. ಫಲಿತಾಂಶದ ದಿನ ಅದರ ಪರಿಣಾಮ ಗೊತ್ತಾಗಲಿದೆ. ಹೆಚ್ಚಿನ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…