BREAKING NEWS

ಸೆಂಟ್ರಲ್‌ನಲ್ಲಿ ಒಳಹೊಡೆತ ಹೊರಹೊಡೆತ ನಡೆದಿದೆ : ಶೆಟ್ಟರ್‌

ಹುಬ್ಬಳ್ಳಿ : ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಒಳ ಹೊಡೆತ ಮತ್ತು ಹೊರ ಹೊಡೆತ ಎರಡೂ ನಡೆದಿದೆ. ಅಂದರೆ ನನ್ನ ಎದುರಾಳಿ ಬಿಜೆಪಿಗೆ ಯಾವ ರೀತಿ ಶಾಕ್‌ ಆಗಲಿದೆ ಎನ್ನುವುದು ಫಲಿತಾಂಶದ ದಿನ ಕಾದು ನೋಡಿ ಎಂದು ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಮಾತಿಗೂ ಕೃತಿಗೂ ಹೊಂದಾಣಿಕೆಯೇ ಇಲ್ಲ. ಇಲ್ಲಿ ನೋಡಿದರೆ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಹೇಳುತ್ತಾರೆ. ಇನ್ನೊಂದು ಕಡೆ ಮೋದಿ ಮುಖ ನೋಡಿ ಮತ ಹಾಕಿ ಎಂದು ಕೇಳುತ್ತಾರೆ. ಬಿಜೆಪಿಯವರಿಗೆ ಪಕ್ಷವೇ ಮುಖ್ಯ ಎನ್ನುವುದಾದರೆ, ವ್ಯಕ್ತಿಯಾಗಿರುವ ಮೋದಿಯವರ ಮುಖ ಯಾಕೆ ಮುಂದೆ ಮಾಡಬೇಕು.

ಒಂದು ವೇಳೆ ಪಕ್ಷವೇ ಮುಖ್ಯವಾದರೆ, ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಏಕೆ ಗೆಲ್ಲಲಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಯಾವುದೇ ಚುನಾವಣೆ ಇರಲಿ ವೈಯಕ್ತಿಕ ನಾಯಕತ್ವ, ಪಕ್ಷದ ಶಕ್ತಿ ಇದ್ದಾಗ ಮಾತ್ರ ಗೆಲುವು ಸಾಧ್ಯ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಣ ಚುನಾವಣೆಯೇ ಹೊರತು, ಶೆಟ್ಟರ್‌ ಮತ್ತು ಕೇಂದ್ರ ಸರ್ಕಾರದ ನಡುವಣ ಚುನಾವಣೆಯಲ್ಲ. ಕಾಂಗ್ರೆಸ್‌ ಅಭ್ಯರ್ಥಿಯಾದ ನಂತರ ದೊಡ್ಡ ಪ್ರಮಾಣದಲ್ಲಿ ನನಗೆ ಜನಬೆಂಬಲ ಸಿಕ್ಕಿದೆ. ದೊಡ್ಡ ಪ್ರಮಾಣದಲ್ಲಿ ಒಳ ಹೊಡೆತ ಆಗಿದೆ. ಫಲಿತಾಂಶದ ದಿನ ಅದರ ಪರಿಣಾಮ ಗೊತ್ತಾಗಲಿದೆ. ಹೆಚ್ಚಿನ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

lokesh

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago