ಆಡಳಿತದಲ್ಲಿ ಸಮನ್ವಯತೆ ಕೊರತೆಯಿಂದ ಅಧಿಕಾರಿಗಳ ಕಿತ್ತಾಟ: ಬಡಗಲಪುರ ನಾಗೇಂದ್ರ

ಮೈಸೂರು: ಆಡಳಿತದಲ್ಲಿ ಸಮನ್ವಯತೆ ಇಲ್ಲದಿರುವುದರಿಂದಾಗಿ ಅಧಿಕಾರಿಗಳು ಈ ರೀತಿ ಕಿತ್ತಾಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ಶನಿವಾರ ನಗರದ ಜಲದರ್ಶಿನಿಯಲ್ಲಿರುವ ಸಂಸದ ಪ್ರತಾಪಸಿಂಹ ಕಚೇರಿ ಎದುರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಕ್ರಿಯಿಸಿದ ಅವರು, ವಿಧಾನಸೌಧದ ಸಚಿವರು ಕೋವಿಡ್ ನಿಯಂತ್ರಣದಲ್ಲಿ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ, ಅಧಿಕಾರಿಗಳು ಸರಿಯಾದ ನಿಟ್ಟಿನಲ್ಲಿ ಒಂದೂಗೂಡಿ ಕೋವಿಡ್ ನಿಯಂತ್ರಿಸದಿದ್ದರೆ ಸರ್ಕಾರದ ನಡೆಯನ್ನು ರೈತ ಸಂಘ ಖಂಡಿಸಲಿದೆ ಎಂದು ಕಿಡಿಕಾರಿದರು.

ಇದೇ ವೇಳೆ, ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

× Chat with us