BREAKING NEWS

ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ : ಎಚ್​ಡಿಕೆ ವಾಗ್ದಾಳಿ

ಬೆಂಗಳೂರು : ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದು ವಾಗ್ದಾಳಿ ಮಾಡಿದ್ದರು. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್​​ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್​​ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.​​​

ಜಾತ್ಯತೀತ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್​​​ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್​ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ? ಎಂದು ಸವಾಲು ಹಾಕಿದ್ದಾರೆ.

ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2006ರಲ್ಲಿ ಬಿಜೆಪಿ ಜತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್​ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ ಮರೆತಿರಾ ಛದ್ಮವೇಷಧಾರಿ?? ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು ಎಂದು ವಾಗ್ದಾಳಿ ಮಾಡಿದರು.

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್​​ಡಿ ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ? ಎಂದು ಹ್ಯಷ್​​ಟ್ಯಾಗ್​​ ಛದ್ಮವೇಷಧಾರಿ ಎಂದು ಟ್ವೀಟ್​ ಮಾಡಿದ್ದಾರೆ.

lokesh

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

2 hours ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

2 hours ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

3 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

4 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

12 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

13 hours ago