BREAKING NEWS

ಸರ್ವಾಧಿಕಾರಿ ಹಿಟ್ಲರ್‌ಗೂ, ಪ್ರಧಾನಿ ಮೋದಿಗೂ ವ್ಯತ್ಯಾಸವಿಲ್ಲ : ಉದ್ಧವ್ ಠಾಕ್ರೆ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ. ಶಿವಸೇನೆ ಸಂಸ್ಥಾಪನಾ ದಿನದ ಮುನ್ನಾ ದಿನ ಮುಂಬೈನಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಉದ್ಧವ್ ಠಾಕ್ರೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸುತ್ತಾ, ಹಿಟ್ಲರ್ ಕೂಡ ಹೀಗೆಯೇ, ಅವನ ಆರಂಭವೂ ಇದೇ ಆಗಿತ್ತು. ಮೊದಲು ಮಾಧ್ಯಮವನ್ನು ನಿಯಂತ್ರಿಸಿದನು. ನಂತರ ಅಧಿಕಾರವನ್ನು ಕೇಂದ್ರೀಕರಿಸಿದನು. ನಾವು ಹಿಟ್ಲರನ ಮಾರ್ಗವನ್ನು ಅನುಸರಿಸುತ್ತಿದ್ದೇವೆಯೇ? ಎಂದು ಪ್ರಶ್ನಿಸಿದ್ದಾರೆ. ರೈತರ ಪ್ರತಿಭಟನೆ ವೇಳೆ ಸಾಮಾಜಿಕ ಮಾಧ್ಯಮಗಳೆಲ್ಲಾ ಸರ್ಕಾರದ ಒತ್ತಡಕ್ಕೆ ಒಳಗಾಗಿತ್ತು ಎಂದು ಟ್ವಿಟರ್ ಮಾಜಿ ಸಿಇಒ ಜಾಕ್ ದೋರ್ಸಿ ಅವರ ಹೇಳಿಕೆ ಬೆನ್ನಲ್ಲೇ, ಠಾಕ್ರೆ ಈ ರೀತಿ ಪ್ರಶ್ನಿಸಿದ್ದಾರೆ.

ಮಣಿಪುರಕ್ಕೆ ಹೋಗದ ಪಿಎಂ ವಿರುದ್ಧ ಟೀಕೆ : ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ಮೋದಿಯವರನ್ನೂ ಠಾಕ್ರೆ ತರಾಟೆಗೆ ತೆಗೆದುಕೊಂಡರು. ಮೋದಿ ಅವರು ಅಮೆರಿಕಕ್ಕೆ ಹೋಗುತ್ತಿದ್ದಾರೆ ಆದರೆ ಮಣಿಪುರಕ್ಕೆ ಇದುವರೆಗೂ ಹೋಗಿಲ್ಲ. ನಿಮಗೆ ಧೈರ್ಯವಿದ್ದರೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತಂಡಗಳನ್ನು ಮಣಿಪುರಕ್ಕೆ ಕಳುಹಿಸಿ. ಅಲ್ಲಿನ ಜನರು ಅವರನ್ನು ನಿಯಂತ್ರಿಸುತ್ತಾರೆ ಎಂದರು.
ಗೃಹ ಸಚಿವ ಅಮಿತ್ ಶಾ ಅವರನ್ನು ಅಫ್ಘಾನಿಸ್ತಾನದ ಆಡಳಿತಗಾರ ಅಹ್ಮದ್ ಶಾ ಅಬ್ದಾಲಿಗೆ ಪರೋಕ್ಷವಾಗಿ ಹೋಲಿಸಿದ್ದಾರೆ.

ಶಿವಸೇನೆ ಕಾರ್ಯಕರ್ತರಿಗೆ ಧನ್ಯವಾದ : ಶಿವಸೇನಾ ಸಂಸ್ಥಾಪನಾ ದಿನವಾದ್ದರಿಂದ ಉದ್ಧವ್ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು. ನಿಮ್ಮಂತಹ ಹೋರಾಟಗಾರರು ನನ್ನೊಂದಿಗೆ ಇರುವುದು ನನ್ನ ಅದೃಷ್ಟ. ನಿಮ್ಮ ಸಾಲವನ್ನು ತೀರಿಸಲು ನನ್ನಿಂದ ಸಾಧ್ಯವಿಲ್ಲ. ನನ್ನ ಬಳಿ ಕಾಗದದ ಮೇಲೆ ಏನೂ ಇಲ್ಲ. ಪಕ್ಷದ ಹೆಸರಿಲ್ಲ, ಪಕ್ಷದ ಚಿಹ್ನೆ ಇಲ್ಲ, ಆದರೂ ನೀವೆಲ್ಲರೂ ನನ್ನೊಂದಿಗಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದಗಳು’ ಎಂದರು.

lokesh

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

17 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

18 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

18 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

19 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

19 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

22 hours ago