BREAKING NEWS

ಇರುವುದೊಂದೇ ಸನಾತನ ಧರ್ಮ ಉಳಿದೆಲ್ಲವೂ ಪಂಥಗಳು : ಯೋಗಿ ಆದಿತ್ಯನಾಥ್

ಲಕ್ನೋ : ಧರ್ಮ ಇರುವುದೊಂದೇ, ಅದುವೇ ಸನಾತನ ಧರ್ಮ. ಉಳಿದೆಲ್ಲವೂ ಪಂಥಗಳು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ.

ಗೋರಖ್‌ಪುರದಲ್ಲಿ ನಡೆದ ಶ್ರೀಮದ್ ಭಾಗವತ ಕಥಾ ಜ್ಞಾನ ಯಾಗ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಸನಾತನ ಧರ್ಮವೊಂದೇ ಧರ್ಮ. ಉಳಿದದ್ದು ಎಲ್ಲಾ ಪಂಥಗಳು ಮತ್ತು ಆರಾಧನಾ ವಿಧಾನಗಳು. ಸನಾತನ ಧರ್ಮ ಮಾನವೀಯತೆಯ ಧರ್ಮವಾಗಿದ್ದು, ಅದರ ಮೇಲೆ ದಾಳಿ ನಡೆಸಿದರೆ ಇಡೀ ವಿಶ್ವದ ಮಾನವೀಯತೆ ತೊಂದರೆಗೆ ಒಳಗಾಗುತ್ತದೆ ಎಂದು ಅವರು ಹೇಳಿದ್ದಾರೆ.

ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಶ್ರೀಮದ್ ಭಾಗವತ್ ಸಾರವನ್ನು ನಿಜವಾಗಿಯೂ ಗ್ರಹಿಸಲು ಮುಕ್ತ ಮನಸ್ಥಿತಿಯನ್ನು ಹೊಂದಿರಬೇಕು. ಸಂಕುಚಿತ ಮನಸ್ಸಿನ ದೃಷ್ಟಿಕೋನಗಳು ಅದರ ಬೋಧನೆಗಳ ವಿಶಾಲತೆಯನ್ನು ಅರಿತುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಕಳೆದ ತಿಂಗಳು ತಮಿಳುನಾಡಿನ ಸಚಿವ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂಬ ಹೇಳಿಕೆಯನ್ನು ನೀಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಯಿತು. ದೇಶಾದ್ಯಂತ ಬಾರೀ ಚರ್ಚೆಗೂ ಈ ವಿಚಾರ ಗ್ರಾಸವಾಯಿತು. ಇದರ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಅವರು ಸನಾತನ ಧರ್ಮದ ಬಗ್ಗೆ ಹೇಳಿಕೆಯನ್ನು ನೀಡಿದ್ದಾರೆ.

ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆ, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಅದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ನಾವು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು.

lokesh

Recent Posts

ಓದುಗರ ಪತ್ರ | ಸಿಇಟಿ ; ನಿಯಮಗಳಿಗೆ ತಿದ್ದುಪಡಿ ಅವಶ್ಯ

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು…

24 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಸೋಲಾದದ್ದು ಮುಚ್ಚುಮರೆಯ ಕ್ಷೇತ್ರ ಪುನರ್‌ ವಿಂಗಡಣೆಗೆ

ದೆಹಲಿ ಕಣ್ಣೋಟ ಸಂಸತ್ತು ಅಂಗೀಕರಿಸಬೇಕಿದ್ದ ಸಂವಿಧಾನದ ೧೩೧ನೇ ತಿದ್ದುಪಡಿ ಮಸೂದೆ ಮಹಿಳಾ ಮೀಸಲಾತಿಯೋ ಅಥವಾ ಜನಗಣತಿಯ ನಂತರ ಲೋಕಸಭೆ ಮತ್ತು…

33 mins ago

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ದಾಳಿಗೆ ಮೋದಿ ಪ್ರತಿಕ್ರಿಯೆ

ನವದೆಹಲಿ : ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು…

49 mins ago

ಆಂದೋಲನ ಹಾಡುಪಾಡು | ಚಾಮರಾಜನಗರದ ರಂಗಭೂಮಿಯ ಕಿರಣ

ಸ್ವಾಮಿ ಪೊನ್ನಾಜಿ... ಕಿರಣ್ ಗಿರ್ಗಿ ಚಾಮರಾಜನಗರದ ಕಿರಿಯ ವಯಸ್ಸಿನ ಪ್ರತಿಭಾವಂತ ರಂಗ ನಿರ್ದೇಶಕ. ಈ ಹಿಂದೆ ಚಾಮರಾಜನಗರದ ರಂಗತರಂಗ ತಂಡದ…

58 mins ago

ಶಂಕಿತ ಶೂಟರ್‌ನ ಚಿತ್ರ, ವಿಡಿಯೊ ಬಿಡುಗಡೆ ಮಾಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗವಹಿಸಿದ್ದ ವೈಟ್‌ ಹೌಸ್‌ ಕರೆಸ್ಪಾಂಡೆಂಟ್ಸ್  ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ…

1 hour ago

ಟ್ರಂಪ್‌ ಭಾಗವಹಿಸಿದ್ದ ಡಿನ್ನರ್‌ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ : ಆಗಿದ್ದೇನು?

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಗವಹಿಸಿದ್ದ ಔತಣಕೂಟ ಕಾರ್ಯಕ್ರಮದ ವೇಳೆ ಗುಂಡಿನ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್,…

1 hour ago