ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದ ಜನರ ರಕ್ಷಣೆಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದೇವೆ. ಎಂದಿನಂತೆ ಅಂಗಡಿಗಳು ಓಪನ್ ಇವೆ, ವಾಹನಗಳು ಓಡಾಡುತ್ತಿವೆ ಎಂದರು.
ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ರಾಜ್ಯದ ಪರವಾಗಿ ಅಧಿಕಾರಿಗಳು ಭಾಗಿಯಾಗುತ್ತಾರೆ. ಬಳಿಕ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಕಾವೇರಿ ವಿಚಾರದಲ್ಲಿ ವಾದ ಮಂಡಿಸಿದವರೆಲ್ಲರೂ ಭಾಗಿಯಾಗುತ್ತಾರೆ ಎಂದರು.
ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಮಾತನಾಡುತ್ತಿದ್ದೇವೆ. ಸಂಕಷ್ಟ ಸೂತ್ರದ ಬಗ್ಗೆ ನಾವು ರೆಡಿ ಮಾಡಿಕೊಳ್ಳುತ್ತೇವೆ. ಬಳಿಕ ಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದರು.
ಕೆಲವರು ನನ್ನ ಬೇಜವಾಬ್ದಾರಿ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾನು ಮಾತನಾಡಲ್ಲ. ನನಗೆ ಅವರಗಿಂತ ಜವಾಬ್ದಾರಿ ಹೆಚ್ಚಿದೆ. ಜವಾಬ್ದಾರಿಯುತ ಸಚಿವನಾಗಿ ನಾನು ಮಾತನಾಡಬೇಕು. ಈ ಬಂದ್ ಎಲ್ಲ ಮುಗಿಯಲಿ, ನಾವು ಚರ್ಚೆ ಮಾಡುತ್ತಿದ್ದೇವೆ ಎಂದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…