Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ತಾಜ್‌ ಹೋಟೆಲ್‌ ದಾಳಿ ಮಾದರಿಯಲ್ಲೇ ಶಾಲೆಗಳಿಗೂ ಬೆದರಿಕೆ ಹಾಕುತ್ತಿದ್ದಾರೆ : ಆರ್.‌ಅಶೋಕ್‌

ಬೆಂಗಳೂರು : ನಗರದ ಹದಿನೈದಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದ್ದ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್‌ ಬೆದರಿಕೆಯಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಮುಂಬೈ ತಾಜ್‌ ಹೋಟೆಲ್‌ ದಾಳಿ ಮಾದರಿಯಲ್ಲಿಯೇ ನಗರದ ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿವೆ. ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಈ ರೀತಿಯ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.

ಇನ್ನು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು ಬಾಂಬ್‌ ಬೆದರಿಕೆ ಹಾಕಲಾದ ಶಾಲೆಗಳಿಗೆ ತೆರಳಿ ಅಲ್ಲಿನ ಪರಿಸ್ಥಿತಿ ವೀಕ್ಷಣೆ ಮಾಡಿದ್ದಾರೆ.

ಬೆಳಗ್ಗೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ ಕಳುಹಿಸಲಾಗಿತ್ತು ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್‌ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದರು.

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್‌ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.

ಬೆದರಿಕೆ ಮೇಲ್‌ ಬಗ್ಗೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್‌ ಸಿಬ್ಬಂಧಿ ಹಾಗೂ ಬಾಂಬ್‌ ಸ್ಕ್ವಾಡ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ