ವಿಲಾಸಿ ಜೀವನಕ್ಕಾಗಿ ಕಂಡವರ ಮನೆಗೆ ಕನ್ನ ಹಾಕುತ್ತಿದ್ದ ಖದೀಮ ಅಂದರ್!

ರಾಮನಗರ: ವಿಲಾಸಿ ಜೀವನಕ್ಕಾಗಿ ಕಂಡವರ ಮನೆಗೆ ಕನ್ನ ಹಾಕುತ್ತಿದ್ದ ಐನಾತಿ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಶಾಂತ್‌ ಬಂಧಿತ ಆರೋಪಿ. ಖದೀಮನಿಂದ 16,85,೦೦೦ ರೂ. ಮೌಲ್ಯದ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಮಾಗಡಿ ರೋಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಿ ವಿಚಾರಣೆ ನಡೆಸಿದಾಗ, 15 ಮನೆಗಳಲ್ಲಿ ಕಳ್ಳತನ ಮಾಡಿ ಮಾಲನ್ನು ಮಾರಾಟ ಮಾಡಿ ಬಂದ ಹಣದಿಂದ ವಿಲಾಸಿ ಜೀವನ ನಡೆಸುತ್ತಿದ್ದ ಎಂಬುದು ತಿಳಿದು ಬಂದಿದೆ.

ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

× Chat with us