BREAKING NEWS

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ; ಯಾರಿಗೆ ಯಾವ ಕ್ಷೇತ್ರ?

ಬೆಂಗಳೂರು: ಕರ್ನಾಟಕ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯನ್ನು ಉಳಿಸಿಕೊಂಡಿದೆ. ಮಾನ್ವಿ ಮತ್ತು ಶಿವಮೊಗ್ಗ ನಗರ ಕ್ಷೇತ್ರಗಳಿಗೆ ಮಾತ್ರ ಟಿಕೆಟ್‌ ಘೋಷಿಸಬೇಕಿದೆ.

ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಬಿಜೆಪಿ, ಎರಡನೇ ಪಟ್ಟಿಯಲ್ಲಿ 23 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿತ್ತು. ಈಗ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಒಟ್ಟು 222 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದಂತಾಗಿದೆ. ಜಗದೀಶ್‌ ಶೆಟ್ಟರ್‌ ಅವರು ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರಕ್ಕೆ ಮಹೇಶ್‌ ಟೆಂಗಿನಕಾಯಿಗೆ ಟಿಕೆಟ್‌ ನೀಡಿದ್ದು, ಕೃಷ್ಣರಾಜದಲ್ಲಿ ಎಸ್‌.ಎ ರಾಮದಾಸ್‌ಗೆ ಟಿಕೆಟ್‌ ಮಿಸ್‌ ಆಗಿದೆ.

ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ!

  1. ನಾಗಠಾಣ: ಸಂಜೀವ್‌ ಐಹೊಳೆ
  2. ಸೇಡಂ: ರಾಜಕುಮಾರ್‌ ಪಾಟೀಲ್‌
  3. ಕೊಪ್ಪಳ: ಮಂಜುಳಾ ಅಮರೇಶ್‌
  4. ರೋಣ: ಕಳಕಪ್ಪ ಬಂಡಿ
  5. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ – ಮಹೇಶ್‌ ಟೆಂಗಿನಕಾಯಿ
  6. ಹಗರಿಬೊಮ್ಮನಹಳ್ಳಿ: ಬಿ ರಾಮಣ್ಣ
  7. ಹೆಬ್ಬಾಳ: ಕಟ್ಟ ಜಗದೀಶ್‌
  8. ಗೋವಿಂದರಾಜನಗರ: ಉಮೇಶ್‌ ಶೆಟ್ಟಿ
  9. ಮಹದೇವಪುರ: ಮಂಜುಳಾ ಅರವಿಂದ್‌ ಲಿಂಬಾವಳಿ
  10. ಕೃಷ್ಣರಾಜ: ಶ್ರೀವತ್ಸಾ

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ವಿ ಸೋಮಣ್ಣ ಅವರ ಪುತ್ರನಿಗೆ ಈ ಕ್ಷೇತ್ರದ ಟಿಕೆಟ್ ಸಿಕ್ಕಿಲ್ಲ. ಸೋಮಣ್ಣ ಅವರಿಗೆ ಚಾಮರಾಜನಗರ ಹಾಗೂ ವರುಣಾದಲ್ಲಿ ಟಿಕೆಟ್ ಕೊಡಲಾಗಿದೆ. ಆದರೆ, ಅವರ ಪುತ್ರ ಅರುಣ್ ಸೋಮಣ್ಣ ಅವರಿಗೆ ಗೋವಿಂದರಾಜನಗರ ಕ್ಷೇತ್ರದಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯನ್ನು ಸೋಮಣ್ಣ ಇಟ್ಟುಕೊಂಡಿದ್ದರು. ಆದರೆ ಅವರಿಗೆ ಬದಲಾಗಿ ಮಾಜಿ ಪಾಲಿಕೆ ಸದಸ್ಯರಾಗಿರುವ ಉಮೇಶ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಹದೇವಪುರ ಟಿಕೆಟ್ ಕೈತಪ್ಪಿದೆ. ಆದರೆ, ಅವರ ಬದಲಾಗಿ ಅವರ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ಕೈತಪ್ಪುವ ಭೀತಿಯಿಂದ ಅವರು ಪಕ್ಷೇತರ ಸ್ಪರ್ಧೆಗೆ ಸಿದ್ಧತೆ ನಡೆಸಿಕೊಂಡಿದ್ದರು. ಈ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆಗೆ ಸಭೆಯನ್ನು ಕೂಡಾ ನಡೆಸಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಅವರು ತಮ್ಮ ಪತ್ನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣರಾಜ ಕ್ಷೇತ್ರದಲ್ಲಿ ಎಸ್‌.ಎ ರಾಮದಾಸ್‌ ಬದಲಾಗಿ ಶ್ರೀವತ್ಸಾ ಅವರಿಗೆ ಟಿಕೆಟ್‌ ನೀಡಲಾಗಿದೆ. ಅದಲ್ಲದೇ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಗೋವಿಂದ ಕಾರಜೋಳ ಅವರ ಪುತ್ರನಿಗೆ ಟಿಕೆಟ್‌ ನೀಡಲಾಗಿತ್ತು. ಆದರೆ, ಈ ಬಾರಿ ಅವರಿಗೆ ಟಿಕೆಟ್‌ ಕೈತಪ್ಪಿದ್ದು, ಸಂಜೀವ್‌ ಐಹೊಳೆಗೆ ಟಿಕೆಟ್‌ ನೀಡಲಾಗಿದೆ.

ಇನ್ನೂ, ಕೊಪ್ಪಳದಲ್ಲಿ ಸಂಸದ ಸಂಗಣ್ಣ ಕರಡಿ ಹಾಗೂ ಸಿವಿ ಚಂದ್ರಶೇಖರ್‌ ನಡುವೆ ಟಿಕೆಟ್‌ ಫೈಟ್‌ ಇತ್ತು. ಆದರೆ, ಇಬ್ಬರಿಗೂ ಮಣೆಹಾಕದ ಬಿಜೆಪಿ ನಾಯಕರು ಮಂಜುಳಾ ಅಮರೇಶ್‌ ಅವರಿಗೆ ಟಿಕೆಟ್‌ ನೀಡಿದ್ದಾರೆ.

andolanait

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

4 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

4 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

4 hours ago