ಬೆಂಗಳೂರು: ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದರು.
ಬಜೆಟ್ನಲ್ಲೂ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದ್ದೇವೆ. ರಾಜ್ಯ ಆರ್ಥಿಕವಾಗಿ ದಿವಾಳಿ ಆಗದಂತೆ ನೋಡಿಕೊಂಡಿದ್ದೇವೆ. 1.30 ಕೋಟಿ ಕುಟುಂಬದ ಯಜಮಾನಿಗೆ ‘ಗೃಹಲಕ್ಷ್ಮೀ’ ಹಣ ನೀಡುತ್ತೇವೆ. ಜುಲೈ 16ರಿಂದ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ಆಗಸ್ಟ್ನಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಆಗಸ್ಟ್ 15 ಅಥವಾ 16ರಂದು ಮನೆ ಯಜಮಾನಿ ಖಾತೆಗೆ ಹಣ ಹಾಕಲಾಗುವುದು ಎಂದರು.
ನಮ್ಮ ಭರವಸೆಗಳು ಈ ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಭಿನ್ನವಾಗಿವೆ. ಅವರು ಬಡವರಿಗೆ ನೀಡುತ್ತಿದ್ದ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಹೀಗಾಗಿ ನಾವು 10 ಕೆಜಿ ಉಚಿತ ನೀಡುವುದಾಗಿ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವು. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಆದರೆ ಈ ಗ್ಯಾರಂಟಿ ಯೋಜನೆಗಳಿಂದ 1.3 ಕೋಟಿ ಕುಟುಂಬಗಳಿಗೆ ಲಾಭವಾಗಲಿದೆ ಎಂದರು.
ಸಾಲ ಜಿಡಿಪಿಯ ಶೇ. 25ರ ಒಳಗೆ ಇರಬೇಕು. ಆದರೆ ನಮ್ಮ ರಾಜ್ಯ ಸರ್ಕಾರದ ಸಾಲ ಶೇ. 23 ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…