ಚಿಕ್ಕಮಗಳೂರು : ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲಲ್ಲ ಎಂದಿದ್ದಾರೆ. ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಫಲಿತಾಂಶ ಅಂತಿಮವಾಗಿ ಸಿ.ಟಿ.ರವಿ ಸೋಲು ಎಂದು ರಿಸಲ್ಟ್ ಹೊರಬಂದ ಬಳಿಕ ಶಾಸಕ ಸಿ.ಟಿ.ರವಿ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.
ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ 1999ರ ಬಳಿಕ ಮೊದಲ ಬಾರಿಗೆ ಬಿಜೆಪಿ ವೈಟ್ ವಾಶ್ ಆಗಿದೆ. 1999ರಲ್ಲೂ ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. ಆ ಬಳಿಕ ಈಗ ಮತ್ತೆ ಐದಕ್ಕೆ ಐದು ಕ್ಷೇತ್ರಗಳು ಕೈ ಪಾಲಾಗಿವೆ. ಜಿಲ್ಲೆಯಲ್ಲಿ ಬಿಜೆಪಿ ವೈಟ್ ವಾಶ್ ಫಲಿತಾಂಶ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸೋಲು-ಗೆಲುವು ಸ್ವಾಭಾವಿಕ : ಜಿಲ್ಲೆಯ ಜನತೆ ನೀಡಿದ ಜನಾದೇಶಕ್ಕೆ ತಲೆಬಾಗುತ್ತೇನೆ. ಚುನಾವಣೆಯಲ್ಲಿ ಸೋಲು-ಗೆಲುವು ಸ್ವಾಭಾವಿಕ. ಗೆಲುವಿನಿಂದ ಬೀಗಿಲ್ಲ. ಸೋಲಿನಿಂದ ಕುಗ್ಗಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲು. ಆಗಿರುವ ತಪ್ಪುಗಳನ್ನ ಸರಿಪಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದಿದ್ದು, ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಕ್ಕ ಅಲ್ಪ ಸಮಯದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದು, ತಾವು ತಂದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲಿ ಎಂದು ಆಶಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಕಾರ್ಯಕರ್ತರು ಧೃತಿಗೆಡುವುದು ಬೇಡ. ಕಾರ್ಯಕರ್ತರಿಗೆ ಸದಾ ಬೆನ್ನೆಲುಬಾಗಿ ನಿಂತು ಧೈರ್ಯ ತುಂಬುವ ಕೆಲಸ ಮಾಡುತ್ತೇನೆ ಎಂದು ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…