BREAKING NEWS

ಒಂದು ವೇಳೆ ಕವಚ್‌ ಅಳವಡಿಸಿದ್ದರೂ ಈ ದುರಂತವನ್ನು ತಪ್ಪಿಸಲು ಆಗುತ್ತಿರಲಿಲ್ಲ : ಅಪಘಾತಕ್ಕೆ ಕಾರಣ ತಿಳಿಸಿದ ರೈಲು ಮಂಡಳಿ ಸದಸ್ಯೆ ಜಯ ವರ್ಮ ಸಿನ್ಹಾ

ನವದೆಹಲಿ : ಅಪಘಾತ ನಡೆದಮಾರ್ಗದಲ್ಲಿ ಒಂದು ವೇಳೆ ಕವಚ್‌ ಸಕ್ರಿಯವಾಗಿದ್ದರೂ ಮೂರು ರೈಲು ದುರಂತವನ್ನು ತಪ್ಪಿಸಲು ಸಾಧ್ಯವಿರಲಿಲ್ಲ ಎಂದು ರೈಲು ಮಂಡಳಿಯ ಸದಸ್ಯೆ ಜಯ ವರ್ಮ ಸಿನ್ಹಾ ಹೇಳಿದ್ದಾರೆ.
ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಮಾರ್ಗದಲ್ಲಿ ಕವಚ್‌ ವ್ಯವಸ್ಥೆ ಇರಲಿಲ್ಲ ಎಂಬ ಆರೋಪ ಸಂಬಂಧಿಸಿದಂತೆ ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ವ್ಯಾಪಾರ ಅಭಿವೃದ್ಧಿ ಸದಸ್ಯೆ ಜಯ ವರ್ಮ ಸಿನ್ಹಾ ಮಾತನಾಡಿ, ವೇಗವಾಗಿ ಚಲಿಸುವ ವಾಹನದ ಮುಂದೆ ಇದ್ದಕ್ಕಿದ್ದಂತೆ ಅಡಚಣೆ ಸೃಷ್ಟಿಯಾದರೆ ಪ್ರಪಂಚದ ಯಾವುದೇ ತಂತ್ರಜ್ಞಾನವು ಆ ಅಪಘಾತವನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಪ್ರಾಥಮಿಕ ತನಿಖೆಯಲ್ಲಿ ಸಿಗ್ನಲಿಂಗ್‌ನಲ್ಲಿ ದೋಷ ಪತ್ತೆಯಾಗಿರುವುದು ತಿಳಿದು ಬಂದಿದೆ. ರೈಲ್ವೇ ಸುರಕ್ಷತಾ ಆಯುಕ್ತರ ವಿವರವಾದ ವರದಿಗಾಗಿ ನಾವು ಇನ್ನೂ ಕಾಯುತ್ತಿದ್ದೇವೆ ಎಂದು ಹೇಳಿದರು.

ಗೂಡ್ಸ್‌ ರೈಲು ಹಳಿ ತಪ್ಪಿರಲಿಲ್ಲ. ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ ಬೋಗಿಗಳು ಇನ್ನೊಂದು ಮುಖ್ಯ ಹಳಿ ಮೇಲೆ ಬಿದ್ದ ಪರಿಣಾಮ ಗರಿಷ್ಠ ಮಟ್ಟದ ಸಾವು ನೋವು ಸಂಭವಿಸಿದೆ. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಬೋಗಿಗಳು ಗಂಟೆಗೆ 126 ಕಿ.ಮೀ ವೇಗದಲ್ಲಿ ಬರುತ್ತಿದ್ದ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ ಎಂದು ತಿಳಿಸಿದರು.

ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಮಯದಲ್ಲಿ ಉಂಟಾದ ಬದಲಾವಣೆಯಿಂದ ಅಪಘಾತ ಸಂಭವಿಸಿರುವುದು ತಿಳಿದು ಬಂದಿದೆ. ಈ ಬದಲಾವಣೆಯನ್ನು ಯಾರು ಮಾಡಿದ್ದಾರೆ ಮತ್ತು ಅದು ಹೇಗೆ ಸಂಭವಿಸಿತು ಎಂಬುದನ್ನು ಸರಿಯಾದ ತನಿಖೆಯ ನಂತರ ಕಂಡುಹಿಡಿಯಲಾಗುವುದು ಎಂದು ಅಧಿಕಾರಿಗಳು ಹೇಳಿದರು.

ಅಪಘಾತ ಹೇಗಾಯಿತು ? : ಒಡಿಶಾ ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ 4 ಹಳಿಗಳು ಇವೆ. ಈ ಪೈಕಿ ಎರಡು ಮುಖ್ಯ ಅಥವಾ ಮೇನ್‌ ಹಳಿಗಳು ಆಗಿದ್ದರೆ ಇನ್ನು ಎರಡು ಲೂಪ್‌ ಹಳಿಗಳು. ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದೇ ಇರಲು ಗೂಡ್ಸ್‌ ರೈಲುಗಳನ್ನು ನಿಲ್ದಾಣದ ಲೂಪ್‌ ಲೈನಿನಲ್ಲಿ ನಿಲ್ಲಿಸಿರುತ್ತಾರೆ. ಅದೇ ರೀತಿಯಾಗಿ ಒಂದು ಹಳಿಯಲ್ಲಿ ಗೂಡ್ಸ್‌ ರೈಲನ್ನು ನಿಲ್ಲಿಸಲಾಗಿತ್ತು. ಸಂಜೆಯ ವೇಳೆ ವೇಗವಾಗಿ ಬರುತ್ತಿದ್ದ ಕೋರಮಂಡಲ್‌ ಎಕ್ಸ್‌ಪ್ರೆಸ್‌ ಹಳಿ ತಪ್ಪಿದೆ. ಈ ರೈಲು ಹಳಿ ತಪ್ಪುವ ಸಮಯದಲ್ಲೇ ಇನ್ನೊಂದು ಕಡೆಯಿಂದ ಬೆಂಗಳೂರಿನಿಂದ ಹೌರಾಗೆ ಹೊರಟಿದ್ದ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಬಂದಿದೆ. ಹಳಿ ತಪ್ಪಿದ ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು ಯಶವಂತಪುರದಿಂದ ಹೊರಟಿದ್ದ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ.

lokesh

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

1 hour ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

2 hours ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

2 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

4 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

12 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

12 hours ago