ಬೆಂಗಳೂರು : ರಾಜಕೀಯ ಸೇರಲು ಯಾವುದೇ ಕಾಲೇಜು ಇಲ್ಲ. ಪದವಿ ವ್ಯಾಸಾಂಗ ಮಗಿಯುತ್ತಿದ್ದಂತೆ ಒಂದು ವರ್ಷ ತರಬೇತಿ ನೀಡಬೇಕು. ಇದರಿಂದ ಯುವ ಸಮೂಹಕ್ಕೆ ರಾಜಕೀಯದ ಬಗ್ಗೆ ತಿಳಿದುಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ. ಈ ನಿಟ್ಟಿನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದರು.
ನೂತನ ಶಾಸಕರಿಗೆ ಹಮ್ಮಿಕೊಂಡಿರುವ ತರಬೇತಿ ಶಿಬಿರದಲ್ಲಿ ಯುಟಿ ಖಾದರ್ ಮಾತನಾಡುತ್ತಾ, ನನಗೂ ಮೊದಲು ಸದನದ ನಡುವಳಿಕೆ ಬಗ್ಗೆ ಗೊತ್ತಿರಲಿಲ್ಲ. ಈ ವೇಳೆ ಧೃವನಾರಯಣ ಅವರ ಬಳಿ ಕೇಳಿ ಕಲಿಯುತ್ತಿದ್ದೆ ಎಂದರು. ಮೊದಲ ಬಾರಿಗೆ ಶಾಸಕರಾಗಿರುವವರಿಗೆ ಪ್ರತಿಯೊಬ್ಬರ ನಡುವೆ ಸಹಕಾರ ಬೆಳೆಯಬೇಕು. ಆಗ ಮಾತ್ರ ಸದನದಲ್ಲಿ ಧೈರ್ಯದಿಂದ ಭಾಗವಹಿಸಲು ಸಾಧ್ಯ. ರಾಜಕೀಯದಲ್ಲಿ ಪ್ರತಿಕ್ರಿಯೆ ಹೆಚ್ಚಿರುತ್ತದೆ. ಈ ವೇಳೆ ತಾಳ್ಮೆ ಬಹಳ ಅಗತ್ಯ. ಸಿಕ್ಕ ಅವಕಾಶ ಉಪಯೋಗಿಸಿಕೊಂಡು, ಜನರ ಮನಸ್ಸಿನಲ್ಲಿ ಉಳಿಯುವ ನಿಟ್ಟಿನಲ್ಲಿ ಕೆಲಸ ಮಾಡಿ. ಶಾಸಕರ ಒಗ್ಗಟ್ಟು ರಾಜ್ಯದ ಶಕ್ತಿ. ಅಭಿಪ್ರಾಯ ಬೇಧದ ಹೊರತಾಗಿ, ಒಗ್ಗಟ್ಟು ಇರಬೇಕು. ಈ ಮೂಲಕ ಸಾಮರಸ್ಯ ಸಮಾಜ ನಿರ್ಮಾಣ ಮಾಡಬೇಕಿದೆ ಎಂದು ತಿಳಿಸಿದರು.
ರಾಜಕೀಯದಲ್ಲಿ ಯಾವುದೇ ಕಾರ್ಯಕ್ರಮ ಮಾಡುವಾಗ ಟೀಕೆ ಟಿಪ್ಪಣಿಗಳು ವ್ಯಕ್ತವಾಗುವುದು ಸಹಜ. ಇದು ಪ್ರಜಾಪ್ರಭುತ್ವದ ಸೌಂದರ್ಯವೂ ಹೌದು. ಸಿದ್ಧಾಂತ ಯಾವುದೇ ಇರಲಿ, ಎಲ್ಲರನ್ನೂ ಕೈಜೋಡಿಸುವಂತೆ ಮಾಡುವುದು ನನ್ನ ಕೆಲಸ ಎಂದು ಹೇಳುತ್ತಾ, ರವಿಶಂಕರ್ ಗುರೂಜಿ, ಗುರುರಾಜ ಕರ್ಜಗಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರಗತಿಪರರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…