ತಿರುವನಂತಪುರಂ : ನಾಳೆ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಕಳೆದ ವಾರ ಪತ್ರ ಬಂದಿತ್ತು ಎಂದು ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ನಿನ್ನೆ ಹೇಳಿದ್ದರು. ಈ ಕುರಿತು ಎಎನ್‌ಐ ಜೊತೆ ಮಾತನಾಡಿದ ಕೊಚ್ಚಿ ನಗರ ಪೊಲೀಸ್ ಕಮಿಷನರ್ ಕೆ.ಸೇತು ರಾಮನ್, ಪ್ರಧಾನಿಗೆ ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕ್ಸೇವಿಯರ್ ಬಂಧಿತ ಆರೋಪಿಯಾಗಿದ್ದು, ವೈಯಕ್ತಿಕ ದ್ವೇಷದ ಕಾರಣ ಈ ರೀತಿ ಪತ್ರ ಬರೆದಿದ್ದ ಎಂದಿದ್ದಾರೆ.
ಪ್ರಧಾನಿ ಮೋದಿ ಕೊಚ್ಚಿ ಆಗಮನ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇದಕ್ಕಾಗಿ 2,060 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ಆಯುಕ್ತರು ಮಾಹಿತಿ ನೀಡಿದ್ದಾರೆ.