ಬೆಂಗಳೂರು : ರಾಜ್ಯದ ೫ ಎಸ್ಕಾಂಗಳ( ವಿದ್ಯುತ್ ಸರಬರಾಜು ನಿಗಮ) ವ್ಯಾಪ್ತಿಯಲ್ಲಿನ ವೆಬ್ ಪೋರ್ಟಲ್‌ಗಳ ತಾಂತ್ರಿಕ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ, ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್ ಸೇವೆಗಳು ಮೂರು ದಿನಗಳವರೆಗೆ ಬಂದ್ ಆಗಲಿವೆ.
ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ ೧೨ರಿಂದ ನವೆಂಬರ್ ೨೬ರ ಬೆಳಿಗ್ಗೆ ೧೧.೫೯ ವರೆಗೆ ಎಲ್ಲಾ ರೀತಿಯ ಆನ್‌ಲೈನ್ ಸೇವೆಗಳು ಬಂದ್ ಆಗಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ತಾಂತ್ರಿಕ ಕಾಮಗಾರಿಯೇನು? : ಎಲ್ಲಾ ಐದು ಎಸ್ಕಾಂ ಪೋರ್ಟಲ್‌ಗಳನ್ನು ಒಂದೇ ಸೂರಿನಡಿ ಆನ್‌ಲೈನ್ ಪಾವತಿ ಸೇವೆ ಕಲ್ಪಿಸಲು ಆರ್-ಎಪಿಡಿಆರ್‌ಪಿ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲಾ ಪೋರ್ಟಲ್‌ಗಳ ಡಾಟಾವನ್ನು ನೂತನ ಪೋರ್ಟಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಾಗಿ ಪೋರ್ಟಲ್ ಸೇವೆ ಬಂದ್ ಆಗಲಿದ್ದು, ವಿದ್ಯುತ್ ಬಿಲ್ ಪಾವತಿ, ಆನ್‌ಲೈನ್ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ.
ಈ ಮೂರು ದಿನಗಳು ಎಲ್ಲಾ ಮಾಹಿತಿ ತಂತ್ರಜ್ಞಾನ ಆಧಾರಿತ ಹಾಗೂ ವಿದ್ಯುತ್ ಕಚೇರಿಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ. ಹಾಗೂ ಆನ್‌ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು/ ಲೋಡ್ ಬದಲಾವಣೆ, ನಗದು ಪಾವತಿ, ಬಿಲ್ ಪಾವತಿ ಸೇವೆಗಳು ಇರುವುದಿಲ್ಲ. ಆದರೆ ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವ್ಯಾವ ನಗರಳಲ್ಲಿ ಸೇವೆ ಸ್ಥಗಿತ :
ಬೆಸ್ಕಾಂ: ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು.
ಮೆಸ್ಕಾಂ: ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.
ಸೆಸ್ಕ್: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್. ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.
ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.
ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸೇವನೂರು, ಸಿರಸಿ, ಕುಮಟಾ, ಬಾಗಲಕೋಟೆ, ರಮಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಾಪುರ ನಗರದಲ್ಲಿ ಮಾಹಿತಿ ತಂತ್ರಜ್ಞಾನ ತಂತ್ರಾಂಶ ಸೇವೆಗಳು ಲಭ್ಯವಿರುವುದಿಲ್ಲ.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…