BREAKING NEWS

ಈಜಲು ಹೋದ ಮೂವರು ಯುವಕರು ನಾಪತ್ತೆ : ಓರ್ವನ ಶವ ಪತ್ತೆ

ಮೈಸೂರು : ಮೀನಾಕ್ಷಿಪುರ ಕಾವೇರಿ‌ ಹಿನ್ನೀರಿನಲ್ಲಿ ಈಜಲು ಹೋದ ಮೂವರು ಯುವಕರು ನಾಪತ್ತೆಯಾದ ಘಟನೆ ನಡೆದಿದ್ದು, ಅದರಲ್ಲಿ ಓರ್ವನ ಶವ ಪತ್ತೆಯಾಗಿದೆ. ಇನ್ನುಳಿದ ಇಬ್ಬರಿಗಾಗಿ‌ ಹುಡುಕಾಟ ನಡೆದಿದೆ.

ಭರತ್(20), ಪ್ರವೀಣ್(20), ವರುಣ್(20) ನಾಪತ್ತೆಯಾದ ಯುವಕರು. ಮೂವರು ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದರು. ಒಟ್ಟು 5 ಜನ ಸ್ನೇಹಿತರು ಕಾವೇರಿ ಹಿನ್ನೀರಿಗೆ ಈಜಲು ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ನಾಪತ್ತೆಯಾಗಿದ್ದರು.

ಇದೀಗ ಭರತ್ ಶವ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

lokesh

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

9 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

10 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

10 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

12 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

12 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

12 hours ago