ದೇವನಹಳ್ಳಿ : ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ದೇವನಹಳ್ಳಿ ಪರಿಶಿಷ್ಟ ಮೀಸಲು ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್ ಘೋಷಿಸಿರುವುದರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹಾಗೂ ಟಿಕೆಟ್ ಆಕಾಂಕ್ಷಿಗಳು ಪಟ್ಟಣದ ಖಾದಿ ಬೋರ್ಡ್ ಕಚೇರಿಯಲ್ಲಿ ಶುಕ್ರವಾರ ಗೋಪ್ಯ ಸಭೆ ನಡೆಸಿದರು.
ಐದು ವರ್ಷಗಳಿಂದ ಕ್ಷೇತ್ರದಲ್ಲಿ ಎಲ್ಲ ಆಕಾಂಕ್ಷಿಗಳು ಸಾಕಷ್ಟು ಜನಪರ ಕೆಲಸ ಮಾಡಿಕೊಂಡು, ಪಕ್ಷ ಸಂಘಟನೆ ಮಾಡಿತ್ತಿದ್ದಾರೆ. ಕಾಂಗ್ರೆಸ್ ಪರ ಜನಾಭಿಪ್ರಾಯ ರೂಪಿಸಲು ಶ್ರಮಿಸಿದ್ದೇವೆ. ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಏಕಿ ಕೆ.ಎಚ್.ಮುನಿಯಪ್ಪರಿಗೆ ಟಿಕೆಟ್ ಘೋಷಿಸಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.
ಸಭೆಯಲ್ಲಿ ಜಮಾವಣೆಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೆ.ಎಚ್.ಮುನಿಯಪ್ಪ ಅವರಿಗೆ ಬೆಂಬಲ ನೀಡುವ ಬದಲು, ಸ್ಥಳೀಯ ಆಕಾಂಕ್ಷಿ ಒಬ್ಬರಿಗೆ ಅವಕಾಶ ಮಾಡಿಕೊಡಬೇಕು. ದೇವನಹಳ್ಳಿ ಹೊರತಾಗಿ ಬೇರೆಡೆ ಕೆ.ಎಚ್.ಮುನಿಯಪ್ಪ ಸ್ಪರ್ಧೆ ಮಾಡಲಿ ಎಂಬ ಚರ್ಚೆಯನ್ನು ತಾಸುಗಟ್ಟಲೇ ನಡೆಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ‘ನನ್ನನ್ನು ಸೇರಿದಂತೆ ಪಕ್ಷದಲ್ಲಿ ಸಾಕಷ್ಟು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಸತತ 3-4 ವರ್ಷ ಪಕ್ಷವನ್ನು ಬಲಿಷ್ಠಗೊಳ್ಳಿಸಲು ಸಾಕಷ್ಟು ಶ್ರಮ ವ್ಯಯಿಸಲಾಗಿದೆ. ರಾಷ್ಟ್ರೀಯ ನಾಯಕ ಕೆ.ಎಚ್.ಮುನಿಯಪ್ಪ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿ ಗೊಂದಲಕ್ಕೆ ಕಾರಣವಾಗಿದೆ. ಹಿರಿಯ ರಾಜಕೀಯ ನಾಯಕರಿಗೆ ಪಕ್ಷಕ್ಕಾಗಿ ದುಡಿಯುತ್ತಿರುವ ಸ್ಥಳೀಯರಿಗೆ ಟಿಕೆಟ್ ಬಿಟ್ಟುಕೊಡುವಂತೆ ಮನವಿ ಮಾಡಿಕೊಳ್ಳುತ್ತೇನೆ’ ಎಂದರು.
10 ವರ್ಷದಿಂದ ಕಾಂಗ್ರೆಸ್ ಶಾಸಕರಿಲ್ಲದೇ ಕ್ಷೇತ್ರವು ನಲುಗಿದೆ. ಪಕ್ಷದ ಬಲವರ್ಧನೆಗಾಗಿ ದುಡಿದ ಒಬ್ಬರಿಗೆ ಟಿಕೆಟ್ ಬಿಟ್ಟುಕೊಡುವಂತೆ ಸಭೆಯಲ್ಲಿ ತೀರ್ಮಾನಿಸಿದ್ದೇವೆ. ಈ ಮನವಿಯನ್ನು ಎಲ್ಲರೂ ಒಂದಾಗಿ ಅವರಿಗೆ ಮನವರಿಗೆ ಮಾಡಿಕೊಡಲು ಪ್ರಯತ್ನಿಸಲಾಗುವುದು ಎಂದರು.
‘ನಾನು 20 ವರ್ಷದಿಂದ ಪಕ್ಷಕ್ಕೆ ದುಡಿದಿದ್ದೇನೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಬಲಿಷ್ಠಗೊಳ್ಳಿಸಲು ಎಲ್ಲರೂ ಒಂದಾಗಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ಮಾಡಿಕೊಟ್ಟಲ್ಲಿ ಗೆಲ್ಲಿಸಿಕೊಂಡು ಬರುತ್ತೇವೆ. ರಾಷ್ಟ್ರೀಯ ನಾಯಕರು ಟಿಕೆಟ್ ಬಿಟ್ಟುಕೊಟ್ಟು ಕಾರ್ಯಕರ್ತರ ಬೆಳವಣಿಗೆಗೆ ಸಹಕಾರಿಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತ ಕುಮಾರ್ ತಿಳಿಸಿದರು.
ಮುಖಂಡರಾದ ಚೌಡಪನಹಳ್ಳಿ ಲೋಕೇಶ್, ಚಿನ್ನಪ್ಪ ಸೇರಿದಂತೆ ತಾಲ್ಲೂಕಿನ ಅನೇಕ ಮುಖಂಡರು, ಕಾರ್ಯಕರ್ತರು ಇದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…