ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್ ನೀಡಲಾಗಿದೆ ಎಂದು ಬಹಿರಂಗಪಡಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಕರ್ನಾಟಕಕ್ಕೆ ಬಂದಾಗೆಲ್ಲಾ ಕುಟುಂಬ ರಾಜಕಾರಣ ಎಂದು ನಿರಂತರ ಬೊಬ್ಬಿರಿಯುವ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಹೇಳುವುದು ಒಂದು, ಮಾಡುವುದು ಒಂದು. ರಾಜ್ಯ ಚುನಾವಣೆಗೆ ಬಿಜೆಪಿ ಕರ್ನಾಟಕದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವ ಪಟ್ಟಿ ನೀಡಿದ್ದೇವೆ, ಬಿಜೆಪಿ ನಾಯಕರು ನೈತಿಕತೆಯನ್ನು ಪ್ರಶ್ನಿಸಿಕೊಳ್ಳಲಿ ಎಂದು ತಿರುಗೇಟು ನೀಡಿದೆ.
1. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕುಟುಂಬ ರಾಜಕಾರಣದ ಕೂಸು, ಅವರ ತಂದೆ ಮಾಜಿ ಸಿಎಂ ಆಗಿದ್ದವರು.
2. ಬಿಎಸ್ ಯಡಿಯೂರಪ್ಪ ತನ್ನ ಪುತ್ರನಿಗೆ ಶಾಸಕ ಟಿಕೆಟ್ ಕೊಡಿಸಲು ಯಶಸ್ವಿಯಾಗಿದ್ದು, ಅವರ ಮತ್ತೊಬ್ಬ ಪುತ್ರ ಸಂಸದರಾಗಿದ್ದಾರೆ.
3. ಶಾಸಕ ರವಿ ಸುಬ್ರಹ್ಮಣ್ಯ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದ್ದು, ಅವರ ಸೋದರನ ಮಗ ತೇಜಸ್ವಿ ಸೂರ್ಯ ಸಂಸದರಾಗಿದ್ದಾರೆ.
4. ಎಂಎಲ್‌ಎ ಜ್ಯೋತಿ ಗಣೇಶ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ, ಅವರ ತಂದೆ ಬಸವರಾಜ್ ಸಂಸದರಾಗಿದ್ದಾರೆ.
5. ಇಬ್ಬರು ಜಾರಕಿಹೊಳಿ ಸಹೋದರರಿಗೆ ಮತ್ತೆ ಎಂಎಲ್‌ಎ ಟಿಕೆಟ್ ನೀಡಲಾಗಿದೆ.
6. ಕತ್ತಿ ಕುಟುಂಬದಲ್ಲಿ, ಉಮೇಶ್ ಕತ್ತಿ ಅವರ ಮಗ ಹಾಗೂ ಸಹೋದರನಿಗೆ ಎಂಎಲ್‌ಎ ಟಿಕೆಟ್ ನೀಡಲಾಗಿದೆ.
7. ಇಬ್ಬರು ರೆಡ್ಡಿ ಸಹೋದರರಿಗೆ ಎಂಎಲ್ಎ ಟಿಕೆಟ್ ನೀಡಲಾಗಿದೆ.
8. ಹರ್ಷವರ್ಧನ್‌ಗೆ ಎಂಎಲ್‌ಎ ಟಿಕೆಟ್ ನೀಡಲಾಗಿದ್ದು, ಅವರ ಮಾವ ಶ್ರೀನಿವಾಸ್ ಪ್ರಸಾದ್ ಸಂಸದರಾಗಿದ್ದಾರೆ.
9. ಬಿಜೆಪಿ ಸಂಸದ ಅಣ್ಣಾಸಾಹೇಬರ ಪತ್ನಿ ಶಶಿಕಲಾ ಜೊಲ್ಲೆಗೆ ಟಿಕೆಟ್ ನೀಡಲಾಗಿದೆ.
10. ಮಾಜಿ ಸಚಿವರ ಪುತ್ರ ಪ್ರೀತಂ ನಾಗಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
11. ಸಂಸದ ಉಮೇಶ್ ಜಾಧವ್ ಮಗ ಅವಿನಾಶ್ ಜಾಧವ್‌ಗೆ ಟಿಕೆಟ್ ನೀಡಲಾಗಿದೆ.
12. ಮಾಜಿ ಸಿಎಂ ಮಗ ಕುಮಾರ್ ಬಂಗಾರಪ್ಪ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.
13. ಮಾಜಿ ಸಚಿವರ ಮಗ ದತ್ತಾತ್ರೇಯ ಪಾಟೀಲ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
14. ಸುರೇಶ್ ಬಾಬು ಮತ್ತು ಶ್ರೀರಾಮುಲು, ಅವರ ಸೋದರಳಿಯ ಮತ್ತು ಚಿಕ್ಕಪ್ಪನಿಗೆ ಟಿಕೆಟ್ ನೀಡಲಾಗಿದೆ.
15. ಮಾಜಿ ಶಾಸಕನ ಪುತ್ರ ಅರವಿಂದ್ ಬೆಲ್ಲದ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
16. ಚಂದ್ರಕಾಂತ ಪಾಟೀಲ್‌ಗೆ ಟಿಕೆಟ್ ನೀಡಲಾಗಿದ್ದು, ಅವರು ತಂದೆ ಶಾಸಕ.
17. ಮಾಜಿ ಸಚಿವರ ಮಗ ಸಪ್ತಗಿರಿ ಗೌಡರಿಗೆ ಟಿಕೆಟ್.
18. ಮಾಜಿ ಶಾಸಕರ ಪುತ್ರ ಅಮೃತ್ ದೇಸಾಯಿಗೆ ಮತ್ತೆ ಟಿಕೆಟ್.
19. ಸಚಿವ ಆನಂದ್ ಸಿಂಗ್ ಅವರ ಮಗ ಸಿದ್ದಾರ್ಥ್ ಸಿಂಗ್‌ಗೆ ಟಿಕೆಟ್.
20. ಮಾಜಿ ಸಚಿವರ ಪುತ್ರಿ ಪೂರ್ಣಿಮಾ ಶ್ರೀನಿವಾಸ್‌ಗೆ ಮತ್ತೆ ಟಿಕೆಟ್ ನೀಡಲಾಗಿದೆ.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…