ಇಂದು ( ನವೆಂಬರ್ 24 ) ಬೆಳಗ್ಗೆಯಷ್ಟೇ ನಂಜನಗೂಡಿನ ಸುತ್ತಮುತ್ತ ಹುಲಿ ಓಡಾಡಿದೆ ಎಂಬ ಸುದ್ದಿ ಅಲ್ಲಿನ ಜನರಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈ ಆತಂಕದಲ್ಲಿಯೇ ದಿನಚರಿ ಆರಂಭಿಸಿದ್ದ ಜನತೆಗೆ ಇದೀಗ ಮಹಿಳೆಯೊಬ್ಬರು ಹುಲಿ ದಾಳಿಗೆ ಬಲಿಯಾದ ಸುದ್ದಿ ಮತ್ತಷ್ಟು ಚಿಂತೆಯನ್ನು ತಂದೊಡ್ಡಿದೆ.
ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ರತ್ಮಮ್ಮ ಎಂಬ ಮಹಿಳೆ ಹುಲಿ ದಾಳಿಗೆ ಸಿಲುಕಿ ಅಸು ನೀಗಿದ್ದಾರೆ. ಹುಲಿ ದಾಳಿಯ ತೀವ್ರತೆ ದೊಡ್ಡ ಮಟ್ಟದಲ್ಲಿದ್ದು ಮೃತ ಮಹಿಳೆಯ ಎಡ ಕಾಲನ್ನು ಹುಲಿ ಅರ್ಧದಷ್ಟು ತಿಂದು ಹಾಕಿದೆ.
ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿ ಹೊತ್ತೊಯ್ದಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಸಮೀಪವಿರುವ ಬಳ್ಳೂರುಹುಂಡಿ ಗ್ರಾಮಕ್ಕೆ ಹೊಂದಿಕೊಂಡಂತಿರುವ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ಈ ದುರ್ಘಟನೆ ನಡೆದಿದೆ. ನರಭಕ್ಷಕ ಹುಲಿಗೆ ಬಲಿಯಾದ ರತ್ನಮ್ಮಳ ಮೃತದೇಹವನ್ನು ಅರಣ್ಯಾಧಿಕಾರಿಗಳಾದ ಪರಮೇಶ್ವರ ಹಾಗೂ ಎ ಟಿ ನಾರಾಯಣರ ತಂಡ ಪತ್ತೆ ಹಚ್ಚಿದೆ. ಕೆಲ ದಿನಗಳ ಹಿಂದೆ ಇದೇ ಸ್ಥಳದಲ್ಲಿ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೂ ಸಹ ಹುಲಿ ದಾಳಿ ನಡೆಸಿತ್ತು. ಹೀಗೆ ಈ ಹಿಂದೆ ಹುಲಿ ದಾಳಿ ನಡೆದಿದ್ದರೂ ಅದನ್ನು ಹಿಡಿಯದ ಅರಣ್ಯಾಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…