ಮಾದಪ್ಪನ ದರ್ಶನಕ್ಕೆ ಸಮಯ ವಿಸ್ತರಣೆ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನದ ಸಮಯವನ್ನು ಗುರುವಾರದಿಂದ ಬೆಳಿಗ್ಗೆ 5ರಿಂದ ರಾತ್ರಿ 9ರವರೆಗೆ ನಿಗದಿಪಡಿಸಲಾಗಿದೆ.

ಕೋವಿಡ್ ನಿಯಮಗಳ ಹಿನ್ನೆಲೆಯಲ್ಲಿ ಸೋಮವಾರದಿಂದ ಬೆಳಿಗ್ಗೆ 6ರಿಂದ ಸಂಜೆ 6 ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಬದಲಾವಣೆ ಮಾಡಲಾಗಿದೆ ಎಂದು ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಿ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

ರಾತ್ರಿ ವಾಸ್ತವ್ಯಕ್ಕೆ ಅವಕಾಶ: ಕೋವಿಡ್ ಹಿನ್ನೆಲೆಯಲ್ಲಿ ಪ್ರಾಧಿಕಾರದ ವಸತಿಗೃಹದಲ್ಲಿ ಭಕ್ತರು ತಂಗುವಂತಿರಲಿಲ್ಲ. ಆದರೆ,ಈಗ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಕೊಠಡಿಗಳನ್ನು ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ವಿವರಗಳಿಗೆ 186- 4254350 ಸಹಾಯವಾಣಿಯನ್ನು ಸಂಪರ್ಕಿಸಬಹುದು.

× Chat with us