ಬೆಂಗಳೂರು: ಕಾಂಗ್ರೆಸ್‌ನ ಐದು ‘ಖಾತರಿ’ಗಳ ಅನುಷ್ಠಾನ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಗೆ ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಶೂನ್ಯವೇಳೆ ಬಳಿಕ ಸಮಯ ನೀಡಿದ್ದರಿಂದ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.
ಕಾಂಗ್ರೆಸ್ ನೀಡಿರುವ ಯಾವ ಖಾತರಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ. ಈ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಕೋರಿ ನೋಟಿಸ್ ನೀಡಿದ್ದೇವೆ. ಪ್ರಶ್ನೋತ್ತರ ಕಲಾಪವನ್ನು ಬದಿಗೊತ್ತಿ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ ಆಗ್ರಹಿಸಿದರು.
ನಿಯಮಗಳ ಪ್ರಕಾರ, ಪ್ರಶ್ನೋತ್ತರ, ಶೂನ್ಯವೇಳೆಯ ಬಳಿಕವೇ ಚರ್ಚೆಗೆ ಅವಕಾಶ ನೀಡಲು ಸಾಧ್ಯ. ಪ್ರಶ್ನೋತ್ತರಕ್ಕೆ ಸಹಕರಿಸಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಇದು ಮಂಗಳವಾರ ಕಲಾಪಕ್ಕೆ ಅಡ್ಡಿಯುಂಟಾಯಿತು. ಅಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಕೋಲಾಹಲಕ್ಕೆ ಕಾರಣವಾಯಿತು.
ಇಂದು ಬೆಳಗ್ಗೆ ಕಲಾಪ ಆರಂಭವಾದ ಕೂಡಲೇ ಬಿಜೆಪಿ ಶಾಸಕರು ಈ ವಿಷಯದ ಬಗ್ಗೆ ಚರ್ಚೆಗೆ ಕಾಲಾವಕಾಶ ಕೋರಿದರು.
ಬಳಿಕ ಶೂನ್ಯವೇಳೆ ನಂತರ ಸಮಯಾವಕಾಶ ನೀಡಲು ಸ್ಪೀಕರ್ ಯುಟಿ ಖಾದರ್ ಒಪ್ಪಿಗೆ ಸೂಚಿಸಿದ ಬಳಿಕ ಬಿಜೆಪಿ ಪ್ರತಿಭಟನೆ ಹಿಂಪಡೆದಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…