ಗುವಾಹಟಿ: ಸಂವಿಧಾನದ ಪಿತಾಮಹರ ಪ್ರಕಾರ, ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರುವ ಸಮಯ ಈಗ ಬಂದಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಂಗಳವಾರ ಹೇಳಿದ್ದಾರೆ.
ಇಂದು ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 25ನೇ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದ ಧನಕರ್ ಅವರು, ಸಂವಿಧಾನದ 44ನೇ ವಿಧಿಯು ದೇಶಾದ್ಯಂತ ತನ್ನ ನಾಗರಿಕರ ಸುರಕ್ಷತೆ ಕಲ್ಪಿಸಲು ಯುಸಿಸಿಯ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ ಎಂದರು.
“ಸಂವಿಧಾನದ ಪಿತಾಮಹರ ಆಲೋಚನಾ ಪ್ರಕ್ರಿಯೆಯಲ್ಲೂ ಯುಸಿಸಿಯ ಚಿಂತನೆಗಳಿದ್ದವು. ಹೀಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಅಡ್ಡಿ ಅಥವಾ ಮತ್ತಷ್ಟು ವಿಳಂಬಕ್ಕೆ ಯಾವುದೇ ಕಾರಣವಿಲ್ಲ” ಎಂದು ಅವರು ಹೇಳಿದರು.
“ಸಂವಿಧಾನವನ್ನು ಅನುಸರಿಸಿ, ಯುಸಿಸಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವಾಗ ಕೆಲವು ಜನರ ಪ್ರತಿಕ್ರಿಯೆ ನೋಡಿ ನಾನು ದಿಗ್ಭ್ರಮೆಗೊಂಡಿದ್ದೇನೆ. ರಾಜಕೀಯ ಹಿತಾಸಕ್ತಿಯು ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಮೇಲೆ ಪರಿಣಾಮ ಬೀರಲು ಸಾಧ್ಯವಿಲ್ಲ’ ಎಂದು ಧನಕರ್ ಹೇಳಿದ್ದಾರೆ.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…