Mysore
17
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ : ಮೂವರ ಸಾವು

ಬೆಂಗಳೂರು : ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ.

ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರಿನ ಚಕ್ರ ಬ್ಲಾಸ್ಟ್ ಆದ ಪರಿಣಾಮ ಅಪಘಾತ ಸಂಭವಿಸಿ ಕಾರು ನಜ್ಜುಗುಜ್ಜಾಗಿದೆ. ಮೃತರನ್ನು ಅಗಸ್ಟಿನ್, ದಾರಾರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ