ಬೆಂಗಳೂರು: ‘ತಿರುಪತಿ ಮೂಲತಃ ಬೌದ್ಧ ಮಂದಿರ’ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಇತ್ತೀಚೆಗೆ National TV ಎಂಬ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಚೇತನ್ ಈ ಹೇಳಿಕೆ ನೀಡಿದ್ದಾರೆ.
ಅದೇ ಹೇಳಿಕೆಯನ್ನು ಸಮರ್ಥಿಸಿ ವಿಡಿಯೊ ಲಿಂಕ್ ಅನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಅವರು, ‘ಇತ್ತೀಚಿನ ಸಂದರ್ಶನವೊಂದರಲ್ಲಿ, ತಿರುಪತಿ ಮೂಲತಃ ಬೌದ್ಧ ಮಂದಿರ ಎಂದು ನಾನು ಹೇಳಿದ್ದೇನೆ. ಕೆ ಜಮನದಾಸ್ ಅವರು ತಿರುಪತಿ ಬಾಲಾಜಿ ಮೂಲತಃ ಬೌದ್ಧ ಮಂದಿರ’ (ಏಪ್ರಿಲ್ 14, 2001) ಎಂಬ ತಮ್ಮ ಪುಸ್ತಕದಲ್ಲಿ ಈ ಹೇಳಿಕೆಯನ್ನು ಮಾನ್ಯ ಮಾಡಿದ್ದಾರೆ. ಇತಿಹಾಸಕಾರರ ಪ್ರಕಾರ, ದೇವಾಲಯಗಳು ಎಂದಿಗೂ ವೈದಿಕ ಸಂಸ್ಥೆಗಳಾಗಿರಲಿಲ್ಲ – ಅವುಗಳನ್ನು ಬೌದ್ಧ ಧರ್ಮದಿಂದ ವಶಪಡಿಸಿಕೊಳ್ಳಲಾಗಿದೆ, ಆಕ್ರಮಣ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಉರಿಗೌಡ–ನಂಜೇಗೌಡ ವಿಚಾರವಾಗಿ ಚೇತನ್ ಅವರು ಮಾಡಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್ ವಿರುದ್ಧ ಹಿಂದೂತ್ವವಾದಿ ಕಾರ್ಯಕರ್ತರಿಂದ ಬೆಂಗಳೂರಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…