BREAKING NEWS

ತಿರುಪತಿ ಮೂಲತಃ ಬೌದ್ಧ ಮಂದಿರ: ನಟ ಚೇತನ್ ಅಹಿಂಸಾ

ಬೆಂಗಳೂರು: ‘ತಿರುಪತಿ ಮೂಲತಃ ಬೌದ್ಧ ಮಂದಿರ’ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

ಇತ್ತೀಚೆಗೆ National TV ಎಂಬ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಚೇತನ್ ಈ ಹೇಳಿಕೆ ನೀಡಿದ್ದಾರೆ.

ಅದೇ ಹೇಳಿಕೆಯನ್ನು ಸಮರ್ಥಿಸಿ ವಿಡಿಯೊ ಲಿಂಕ್ ಅನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಅವರು, ‘ಇತ್ತೀಚಿನ ಸಂದರ್ಶನವೊಂದರಲ್ಲಿ, ತಿರುಪತಿ ಮೂಲತಃ ಬೌದ್ಧ ಮಂದಿರ ಎಂದು ನಾನು ಹೇಳಿದ್ದೇನೆ. ಕೆ ಜಮನದಾಸ್ ಅವರು ತಿರುಪತಿ ಬಾಲಾಜಿ ಮೂಲತಃ ಬೌದ್ಧ ಮಂದಿರ’ (ಏಪ್ರಿಲ್ 14, 2001) ಎಂಬ ತಮ್ಮ ಪುಸ್ತಕದಲ್ಲಿ ಈ ಹೇಳಿಕೆಯನ್ನು ಮಾನ್ಯ ಮಾಡಿದ್ದಾರೆ. ಇತಿಹಾಸಕಾರರ ಪ್ರಕಾರ, ದೇವಾಲಯಗಳು ಎಂದಿಗೂ ವೈದಿಕ ಸಂಸ್ಥೆಗಳಾಗಿರಲಿಲ್ಲ – ಅವುಗಳನ್ನು ಬೌದ್ಧ ಧರ್ಮದಿಂದ ವಶಪಡಿಸಿಕೊಳ್ಳಲಾಗಿದೆ, ಆಕ್ರಮಣ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಉರಿಗೌಡ–ನಂಜೇಗೌಡ ವಿಚಾರವಾಗಿ ಚೇತನ್ ಅವರು ಮಾಡಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್‌ ವಿರುದ್ಧ ಹಿಂದೂತ್ವವಾದಿ ಕಾರ್ಯಕರ್ತರಿಂದ ಬೆಂಗಳೂರಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

andolanait

Recent Posts

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

48 mins ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

50 mins ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

5 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

5 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

5 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

5 hours ago