BREAKING NEWS

ಕೀಳನಪುರದಲ್ಲಿ ಭೀತಿ ಮೂಡಿಸಿದ್ದ ಚಿರತೆ ಸೆರೆ

ಮೈಸೂರು ಜಿಲ್ಲೆಯಲ್ಲಿ ಎರಡು ವಾರದಲ್ಲಿ ಏಳು ಚಿರತೆಗಳು ಬೋನಿಗೆ

ಮೈಸೂರು:ಜಿಲ್ಲೆಯಲ್ಲಿ ಚಿರತೆಯ ಸದ್ದು ಮುಂದುವರಿದಿದೆ. ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆಯೊಂದು ಮಂಗಳವಾರ ಬೋನಿಗೆ ಬಿದ್ದಿದೆ.

ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಈ ಚಿರತೆ ಓಡಾಟ ನಡೆಸುತ್ತಿತ್ತು. ಮೂರು ದಿನಗಳ ಹಿಂದೆ ಕರು ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದಾಗಿ ಜನರು ಭೀತಿಗೊಳಗಾಗಿದ್ದರು. ಚಿರತೆ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯಾಧಿಕಾರಿಗಳು ಅದೇ ಕರುವಿನ ಮೃತದೇಹವನ್ನು ಬೋನಿನಲ್ಲಿಟ್ಟು ಚಿರತೆಯ ಬರುವಿಕೆಗೆ ಕಾಯುತ್ತಿದ್ದರು.

ಅಧಿಕಾರಿಗಳ ಎಣಿಕೆಯಂತೆ ಕೀಳನಪುರ ಗ್ರಾಮದ ಪರಶಿವಪ್ಪ ಅವರ ಜಮೀನಿಗೆ ಕರು ಮಾಂಸದ ಆಸೆಯಿಂದ ಬಂದ ಚಿರತೆ ಬೋನಿಗೆ ಬಿದ್ದಿದೆ. ಸೆರೆಯಾದ ಚಿರತೆ ಸುಮಾರು 8 ವರ್ಷದ್ದೆಂದು ಅಂದಾಜಿಸಲಾಗಿದೆ. ಚಿರತೆಯನ್ನು ಸೆರೆ ಹಿಡಿದು ಕಾಲರ್‌ ಅಳವಡಿಸಿ ಮಲಮಹದೇಶ್ವರ ವನ್ಯ ಜೀವಿ ವಿಭಾಗದ ಅರಣ್ಯಕ್ಕೆ ಬಿಡಲಾಗಿದೆ. ಆರ್​ಎಫ್​​ಓ ಸುರೇಂದ್ರ, ಡಿಆರ್‌ಎಫ್‌ಓ ವಿಜಯಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಈ ತಿಂಗಳಲ್ಲಿ ಮೈಸೂರು ತಾಲ್ಲೂಕಿನಲ್ಲಿ ಸೆರೆ ಸಿಕ್ಕಿದ ಏಳನೇ ಚಿರತೆ ಇದಾಗಿದೆ. ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಡಿಸೆಂಬರ್‌ 16 ರಂದು ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಇದಾದ ಮರುದಿನವೇ ಮಾರಶೆಟ್ಟಿ ಗ್ರಾಮದಲ್ಲಿ ಜಾನುವಾರು ಬೇಟೆಯಾಡುತ್ತಿದ್ದ ಮೂರು ವರ್ಷ ಪ್ರಾಯದ ಹೆಣ್ಣು ಚಿರತೆ ಕೊನೆಗೂ ಬೋನಿಗೆ ಬಿದ್ದಿತ್ತು.

ಡಿಸೆಂಬರ್‌ 22ರಂದು ತಿ.ನರಸೀಪುರ ಗ್ರಾಮದ ಮತ್ತತ್ತಿ ಗ್ರಾಮದಲ್ಲಿ ಕೋಳಿ ತಿನ್ನಲು ಬಂದ ಎರಡೂವರೆ ವರ್ಷದ ಚಿರತೆ ಸೆರೆಯಾಗಿತ್ತು.

ಡಿಸೆಂಬರ್‌ 23ರಂದು ತಿ.ನರಸೀಪುರ ತಾಲ್ಲೂಕಿನಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಎಂಟು ವರ್ಷಗಳ ಗಂಡು ಚಿರತೆ ಎಂ.ಎಲ್.ಹುಂಡಿ ಗ್ರಾಮದ ಮಲ್ಲಪ್ಪನ ಬೆಟ್ಟದಲ್ಲಿ ಸೆರೆ ಸಿಕ್ಕಿತ್ತು

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago