BREAKING NEWS

ಸಿದ್ದಗಂಗಾ ಮಠದ ಉತ್ತರಾಧಿಕಾರಿಗೆ ಇಂದು ಪಟ್ಟಾಭಿಷೇಕ

ತುಮಕೂರು : ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯುತ್ತಿದೆ. ಶ್ರೀ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ಅವರ ಪಟ್ಟಾಭಿಷೇಕವನ್ನು ಸಿದ್ದಗಂಗಾ ಹಳೆಯ ಮಠದ ಆವರಣದಲ್ಲಿ ನಡೆಸಲಾಗುತ್ತಿದ್ದು, ಕೆಲವರಿಗೆ ಮಾತ್ರ ಆಹ್ವಾನವಿದೆ. ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ.

ಜಗಜ್ಯೋತಿ ಬಸವೇಶ್ವರರ ಜಯಂತಿ ದಿನದಂದು ಶ್ರೀಮಠಕ್ಕೆ ನೇಮಿಸಲಾಗಿರುವ ಉತ್ತರಾಧಿಕಾರಿ ಮನೋಜ ಕುಮಾರ್​ ಅವರ ಪಟ್ಟಾಭಿಷೇಕ ಸಮಾರಂಭ ಸರಳವಾಗಿ ನಡೆಯಲಿದೆ. ಇದೇ ವೇಳೆ, ಶಾಖಾ ಮಠವಾದ ಬಂಡೇಮಠಕ್ಕೆ ಹರ್ಷ ಕೆ.ಎಂ, ಬೆಂಗಳೂರು ಗ್ರಾಮಂರದ ವಿಜಯಪುರದ ಬಸವಕಲ್ಯಾಣ ಮಠಕ್ಕೆ ಗೌರೀಶ್​ ಕುಮಾರ್​ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದ್ದು, ಮೂವರಿಗೂ ಇಂದು ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.

ಬೆಳಗ್ಗೆ 5 ಗಂಟೆಯಿಂದ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿ 6:30ಕ್ಕೆ ದೀಕ್ಷಾ ಸಂಸ್ಕಾರ ಮುಗಿಯುತ್ತದೆ. ನಂತರ ಬೆಳಿಗ್ಗೆ 7:30ಕ್ಕೆ ಪಟ್ಟಾಭಿಷೇಕ ಸರಳವಾಗಿ ಆರಂಭವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಹಾಗೂ ಬೇಲಿ ಮಠದ ಶಿವಾನುಭವ ಚರಮೂರ್ತಿ ಶಿವಮೂರ್ತಿ ಮಹಾಸ್ವಾಮಿಗಳು ಸೇರಿ ಅನೇಕ ಮಠಾಧೀಶರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಸಾರ್ವಜನಿಕರು ಹಾಗೂ ಹಿತೈಷಿಗಳು ಮಾತ್ರ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸರಳವಾಗಿ ಈ ಸಮಾರಂಭ ಆಯೋಜನೆ ಮಾಡಲಾಗುತ್ತಿದ್ದು, ಮಠದ ಭಕ್ತಾದಿಗಳು ಸಹಕಾರ ನೀಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದ ಮನವಿ ಮಾಡಿದೆ.

ನಮ್ಮ ದೇಶದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಭಾರಿ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತದೆ. ದೇಶದ ಹಲವು ಧಾರ್ಮಿಕ ಮಠಗಳು, ಮಂದಿರಗಳು ಹಾಗೂ ಸಂಸ್ಥೆಗಳು ಕೂಡ ತಮ್ಮ ಸೇವೆಯನ್ನು ನಿರಂತರವಾಗಿ ಸಲ್ಲಿಸುತ್ತಾ ಬಂದಿವೆ. ಹೀಗೆ ಸ್ವಾತಂತ್ರ್ಯದ ಪೂರ್ವದಿಂದಲೂ ಊಟ, ವಸತಿ ಹಾಗೂ ಶಿಕ್ಷಣ ಸೇರಿ ತ್ರಿವಿಧ ದಾಸೋಹ ನೆರವೇರಿಸುತ್ತಾ ಬಂದಿರುವ ತುಮಕೂರಿನ ಸಿದ್ದಗಂಗಾ ಮಠ ದೇಶದಲ್ಲಿಯೇ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗ ಸುಮಾರು 10 ಸಾವಿರ ವಿದ್ಯಾರ್ಥಿಗಳು ಮಠದಲ್ಲಿ ಅಭ್ಯಾಸ ಮಾಡತ್ತಿದ್ದಾರೆ.

 

lokesh

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

17 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

43 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago