BREAKING NEWS

ಇಂದು ವರ್ಷದ ಕೊನೆಯ ಚಂದ್ರಗ್ರಹಣ : ಹಲವು ದೇಗುಲಗಳು ಬಂದ್

ಬೆಂಗಳೂರು : ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಮಧ್ಯರಾತ್ರಿ 1:5 ಗಂಟೆಗೆ ಚಂದ್ರಗ್ರಹಣ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಒಟ್ಟಾರೆ ಗ್ರಹಣದ ಅವಧಿ 1 ತಾಸು 19 ನಿಮಿಷ ಆಗಿದೆ.

ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಸಂಜೆಯ ಮಹಾಪೂಜೆಯ ಸಮಯ ಬದಲಾಗಿದ್ದು, ದೇವಾಲಯವನ್ನು ಕೆಲವೆಡೆ ಬೇಗನೆ ಬಂದ್‌ ಮಾಡಿದರೆ, ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದು ವರ್ಷದ ಕೊನೆಯ ಗ್ರಹಣವಾಗಿದ್ದು, ಇದಾದ ಬಳಿಕ ದೇಶದಲ್ಲಿ 2025ರ ಸೆ.7ರಂದು ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಕಳೆದ ಬಾರಿ ನ.8, 2022ರಂದು ಚಂದ್ರಗ್ರಹಣ ಸಂಭವಿಸಿತ್ತು. ಇಡೀ ದೇಶದಲ್ಲಿ ಚಂದ್ರಗ್ರಹಣ ಕಾಣಲಿದ್ದು, ಇದರ ಜೊತೆಗೆ ಏಷ್ಯಾ ಖಂಡ ಸೇರಿ ಎಲ್ಲ ಕಡೆಗಳಲ್ಲಿಯೂ ವೀಕ್ಷಿಸಬಹುದಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಚಂದ್ರಗ್ರಹಣ ಇರುವುದರಿಂದ ತಿರುಪತಿ ತಿಮ್ಮಪ್ಪನ ದರ್ಶನವನ್ನು 8 ಗಂಟೆಗಳ ಕಾಲ ರದ್ದು ಮಾಡಲಾಗಿದೆ. ಈ ಸಮಯದಲ್ಲಿ ದೇವಾಲಯಗಳನ್ನು ಮುಚ್ಚಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಘೋಷಿಸಿದೆ. ಗ್ರಹಣದ ಬಳಿಕ ದೇವಸ್ಥಾನವನ್ನು ಸ್ವಚ್ಚಗೊಳಿಸಲಾಗುತ್ತದೆ. ನಂತರ ಭಕ್ತರು ದೇವರ ದರ್ಶನ ಮಾಡಬಹುದಾಗಿದೆ. ನಿತ್ಯ ಲಕ್ಷಾಂತರ ಭಕ್ತರು ದೂರದೂರುಗಳಿಂದ ತಿರುಪತಿಗೆ ಭೇಟಿ ನೀಡುತ್ತಾರೆ. ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಾರೆ. ಆದರೆ ಚಂದ್ರ ಗ್ರಹಣದ ಈ ಸಮಯದಲ್ಲಿ ದೇವಸ್ಥಾನವನ್ನು ಮುಚ್ಚಲಾಗುತ್ತದೆ. ಹೀಗಾಗಿ ಭಕ್ತರು ಈ ಸಮಯದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವುದನ್ನು ತಪ್ಪಿಸಬೇಕು ಎಂದು ಸೂಚನೆ ನೀಡಲಾಗಿದೆ. ಅಕ್ಟೋಬರ್ 28ರ ಸಂಜೆ 7ರಿಂದ ಅಕ್ಟೋಬರ್ 29 ಬೆಳಗಿನ ಜಾವ 3.15ರವರೆಗೆ ದೇವಸ್ಥಾನದಲ್ಲಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ.

ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನವನ್ನು ಸಂಜೆ 6ಕ್ಕೆ ಬಂದ್ ಮಾಡಲಾಗುವುದು. ಅ.29 ರಂದು ಬೆಳಗ್ಗೆ 7.30ರ ನಂತರ ಭಕ್ತಾದಿಗಳ ದರ್ಶನಕ್ಕೆ ತೆರೆಯಲು ನಿರ್ಧರಿಸಲಾಗಿದೆ. ಹುಬ್ಬಳಿಯ ವಿವಿಧ ದೇವಾಲಯಗಳಲ್ಲಿ ಗ್ರಹಣ ಸಂದರ್ಭದಲ್ಲಿ ಅಭಿಷೇಕ, ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ರಾತ್ರಿ ಗ್ರಹಣ ಅವಧಿಯಲ್ಲಿ ದೇವಾಲಯಗಳಲ್ಲಿ ವಿಶೇಷ ಅಭಿಷೇಕ ನಡೆಯಲಿದೆ. ಇನ್ನು, ಗ್ರಹಣ ನಿಮಿತ್ತ ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಸಂಜೆ 4ರಿಂದ 5.30ರ ತನಕ ಮಾತ್ರ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಅವಕಾಶ ಇದೆ.

ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಅಕ್ಟೋಬರ್​ 28ರಂದು ಶನಿವಾರ ಕರಾವಳಿ ದೇವಾಲಯಗಳ ದೇವರ ದರ್ಶನಗಳಲ್ಲಿ ವ್ಯತ್ಯಯ ಆಗಲಿದೆ. ಕುಕ್ಕೆ ದೇವಾಲಯದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ. 28ರಂದು ಶನಿವಾರ ರಾತ್ರಿಯ ಮಹಾಪೂಜೆ ಸಾಯಂಕಾಲ 6.30ಕ್ಕೆ ಮುಕ್ತಾಯಗೊಳ್ಳಲಿದೆ. ಆ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಈ ದಿನ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ ಪ್ರಸಾದ ಭೋಜನದ ಪ್ರಸಾದ ವಿತರಣೆ ಇರುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

lokesh

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

2 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

4 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

4 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

4 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

4 hours ago