ಟೋಕಿಯೋ ಒಲಿಂಪಿಕ್ಸ್‌: ಕಂಚು ಗೆದ್ದ ಕುಸ್ತಿಪಟು ಬಜರಂಗ್‌ ಪೂನಿಯಾ

ಟೋಕಿಯೋ: ಭಾರತದ ಭರವಸೆಯ ಆಟಗಾರ ಕುಸ್ತಿಪಟು ಬಜರಂಗ್‌ ಪೂನಿಯಾ ಅವರು ಕಂಚು ಪದಕವನ್ನು ಜಯಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಪ್ರೀಸ್ಟೈಲ್‌ 65 ಕೆ.ಜಿ ವಿಭಾಗದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಪೂನಿಯಾ ಅವರು ಕಜಕಿಸ್ತಾನದ ಡೌಲೆಟ್ ನಿಯಾಜ್ಬೆಕೊವ್ ವಿರುದ್ಧ 8-0 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ತಂದುಕೊಟ್ಟ 6ನೇ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಬಜರಂಗ್‌ ಪೂನಿಯಾ ಪಾತ್ರರಾಗಿದ್ದಾರೆ.

× Chat with us