ನವದೆಹಲಿ: ಇದೇ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ದಿನಾಂಕವನ್ನು ಮಾ.೧೬ ರಂದು ಘೋಷಣೆ ಮಾಡಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಆಯೋಗದ ನೂತನ ಆಯುಕ್ತರು ನಾಳೆ ಮದ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ.
ಇದರ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಂಬಂಧ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆಯಿದ್ದು, ಆಂಧ್ರ ಪ್ರದೇಶ್, ಸಿಕ್ಕಿಂ, ಅರುಣಾಚಲ ಪ್ರದೇಶ್ ಮತ್ತು ಒಡಿಶಾ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಾಗುವುದು.





