ಬೆಳಗಾವಿ : ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ.
ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಏರ್ ಫೋರ್ಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ಬೆಳಗ್ಗೆ 9.30 ಕ್ಕೆ ಸಾಂಬ್ರಾ ಏರ್‌ಪೋರ್ಟ್ ನಿಂದ ರೆಡ್‌ಬರ್ಡ್ ಸಂಸ್ಥೆಗೆ ಸೇರಿದ VT-RBF ತರಬೇತಿ ವಿಮಾನ ಟೇಕಾಫ್ ಆಗಿತ್ತು. ವಿಮಾನದಲ್ಲಿ ಇಬ್ಬರು ಪೈಲೆಟ್ಗಳು ಓಡಿಸುತ್ತಿದ್ದರು. ಈ ವೇಳೆ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಹೊನ್ನಿಹಾಳ ಗ್ರಾಮದ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಇಬ್ಬರು ಪೈಲೆಟ್‌ಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ವಾಯುಸೇನೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಗುರುವಾರ ವಿಧಿವಶರಾಗಿದ್ದಾರೆ. ಅವರ ಗೌರವಾರ್ಥ ಕೇಂದ್ರ ಸರ್ಕಾರ ದೇಶಾದ್ಯಂತ 7 ದಿನಗಳ…
ಪುನೀತ್ ಮಡಿಕೇರಿ: ರಾಜ್ಯದಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಭಾಗ ಮಂಡಲ-ಕರಿಕೆ ಮಾರ್ಗ ಸಂಪೂರ್ಣವಾಗಿ ಹದಗೆಟ್ಟಿದ್ದು, ರಸ್ತೆ…
ಆಂದೋಲನ ವಿಶೇಷ ಸಂದರ್ಶನದಲ್ಲಿ ಹುಲಿ ಯೋಜನೆಯ ನಿರ್ದೇಶಕರೂ ಆದ ಪಿ.ಎ ಸೀಮಾ ಬದ್ಧತೆಯ ನುಡಿ ಮೈಸೂರು: ದೇಶದಲ್ಲೇ ಅತಿ ಹೆಚ್ಚು…
ಮಂಡ್ಯ ಸಾಹಿತ್ಯ ಸಮ್ಮೇಳನ ಮುಗಿಯುತ್ತಿದ್ದಂತೆ ಪರಿಷತ್ತಿನಲ್ಲಿ ಭಿನ್ನಮತ ಸ್ಫೋಟ! ? ಹೊಸ ಅಧ್ಯಕ್ಷರು ನೇಮಕವಾಗುತ್ತಿದ್ದಂತೆ ಮಾಡಬೇಕೆನ್ನುತ್ತಿದ್ದಾರೆ ಪರಿಷತ್ ಭವನವನ್ನು ಮಾರಾಟ!?…
ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಲಕ್ಷಿ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್‌ವರೆಗಿನ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಬೇಕು…
ಶಸ್ತ್ರಚಿಕಿತ್ಸೆಗೆಂದು ಅಮೆರಿಕದ ಫ್ಲೋರಿಡಾ ಆಸ್ಪತ್ರೆಗೆ ತೆರಳಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶಿವರಾಜ್‌ಕುಮಾರ್‌ರವರು ಶಸಚಿಕಿತ್ಸೆಯ ನಂತರ ಆರೋಗ್ಯವಾಗಿದ್ದಾರೆ ಎಂದು…