BREAKING NEWS

211 ಪೊಲೀಸ್​ ಇನ್ಸ್​ಪೆಕ್ಟರ್ ವರ್ಗಾವಣೆ : ಕೆಲವರ ಟ್ರಾನ್ಸ್​ಫರ್​ಗೆ ಸರ್ಕಾರದಿಂದ ತಡೆ

ಬೆಂಗಳೂರು : ವಿರೋಧ ಪಕ್ಷಗಳ ಹಲವು ಆರೋಪಗ ನಡುವೆಯೂ ಕಾಂಗ್ರೆಸ್​ ಸರ್ಕಾರದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಜೋರಾಗಿದೆ. ನೆನ್ನೆ ವರ್ಗಾವಣೆ ಮಾಡಿದ್ದ ಕೆಲ ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದೆ. ​

ನೆನ್ನೆ ಬರೋಬ್ಬರಿ 211 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಏಕಾಏಕಿ ಇಂದು ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಯಾವೆಲ್ಲಾ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ?

1.ಜಗದೀಶ್ – ಕೆ ಎಸ್ ಲೇಔಟ್ ಠಾಣೆ
2.ವಜ್ರಮುನಿ – ಕೆ ಆರ್ ಮಾರ್ಕೆಟ್
3.ರವಿಕುಮಾರ್ – ಪುಟ್ಟೇನಹಳ್ಳಿ
4.ಅನಿಲ್‌ಕುಮಾರ್ – ಮಲ್ಲೇಶ್ವರಂ
5.ಜಿಗಣಿ – ಎಡ್ವಿನ್ ಪ್ರದೀಪ್
6.ರವಿ ಗೌಡ ಬಿ- ಯಶವಂತಪುರ ಟ್ರಾಫಿಕ್ ಸಂಚಾರ
7.ಯಶತಪುರ ಲಾ ಅಂಡ್ ಆರ್ಡರ್ – ಧನಂಜಯ್
8.ಲಕ್ಷ್ಮಣ್ ಜೆ – ನಂದಿನಿ ಲೇಔಟ್ ಪೊಲೀಸ್
9.ಅಶತ್ಥಗೌಡ- ಜಾನ್ಞಭಾರತಿ ಪೊಲೀಸ್ ಠಾಣೆ
10.ಗೋವಿಂದರಾಜು – ಪಿಣ್ಯ ಪೊಲೀಸ್ ಠಾಣೆ.
11.ಕೃಷ್ಣಕುಮಾರ್- ಬೇಗೂರು ಪೊಲೀಸ್ ಠಾಣೆ

ಒಟ್ಟು 11 ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ ನೀಡಿ ಡಿಜಿಐಜಿಪಿ ಕಚೇರಿಯಿಂದ ಆದೇಶ ಹೊರಬಿದ್ದಿದೆ.

ನೆನ್ನೆ ಒಂದೇ ದಿನ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಬಹುತೇಕ ಜಿಲ್ಲೆ, ಸಿಸಿಬಿ , ಗುಪ್ತ ವಾರ್ತೆಯ ಪೊಲೀಸ್ ಇನ್ ಸ್ಪೆಕ್ಟರ್‌ಗಳ ವರ್ಗಾವಣೆ ಆಗಿತ್ತು. ಇದರಲ್ಲಿ ಇದೀಗ ಕೆಲವರ ವರ್ಗಾವಣೆಯನ್ನು ದಿಢೀರ್ ತಡೆಹಿಡಿದಿರುವುದು ಚರ್ಚೆ ಹುಟ್ಟುಹಾಕಿದೆ.

lokesh

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

2 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

2 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

2 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

2 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

2 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

2 hours ago