BREAKING NEWS

ಐಎಎಸ್‌ ಅಧಿಕಾರಿಗಳ ವರ್ಗಾವಣೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್

ಬೆಂಗಳೂರು: ರಾಜ್ಯ ಸರಕಾರ ಶುಕ್ರವಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮುಲೈ ಮುಹಿಲನ್ ಎಂಪಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ, ಜಿಲ್ಲಾಧಿಕಾರಿಯಾಗಿದ್ದ ರವಿ ಕುಮಾರ್ ಎಂ.ಆರ್. ಅವರ ಸ್ಥಾನವನ್ನು ಬದಲಾಯಿಸಲಾಗಿದೆ.

ಮುಲೈ ಮುಹಿಲನ್ ಎಂಪಿ ಅವರು ಬೆಂಗಳೂರಿನಲ್ಲಿರುವ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು, ಇವರು 2013ರ ಬ್ಯಾಚ್‌ನ ಐಎಎಸ್ ಅಧಿಕಾರಿ. ರವಿಕುಮಾರ್ ಎಂ ಆರ್ ಅವರು 2022, ಅಕ್ಟೋಬರ್ 31 ರಂದು ದಕ್ಷಿಣ ಕನ್ನಡದ ಡಿಸಿ ಸ್ಥಾನವನ್ನು ವಹಿಸಿಕೊಂಡಿದ್ದರು.

ಮತ್ತೊಂದು ಗಮನಾರ್ಹವಾದ ಆಡಳಿತಾತ್ಮಕ ಬದಲಾವಣೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಮಾರ್ ಅವರನ್ನು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಡಾ.ಕುಮಾರ್ ಅವರು ಫೆಬ್ರವರಿ 19, 2021 ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ವರ್ಗಾವಣೆಗೊಂಡ ಅಧಿಕಾರಿಗಳು
ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ
ರವೀಂದ್ರ ಪಿ.ಎನ್.- ಡಿಸಿ ಚಿಕ್ಕಬಳ್ಳಾಪುರ
ಶ್ರೀನಿವಾಸ್ ಕೆ.-ಡಿಸಿ ತುಮಕೂರು
ಜಾನಕಿ ಕೆ.ಎಂ.-ಡಿಸಿ ಬಾಗಲಕೋಟೆ
ಮುಲ್ಲೈ ಮುಹಿಲನ್ – ಡಿಸಿ ದಕ್ಷಿಣ ಕನ್ನಡ
ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
ಡಾ. ಕುಮಾರ, ಡಿಸಿ ಮಂಡ್ಯ
ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
ನವೀನ್ ಕುಮಾರ್ ರಾಜು, ಇಡಿ ವಸತಿ ಶಿಕ್ಷಣ ಸೊಸೈಟಿ

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

8 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago