ಮಳವಳ್ಳಿ : ಸರ್ಕಾರಿ ಬಸ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಮದ್ದೂರು ತಾಲೂಕು ಸಾದೊಳಲು ಗ್ರಾಮದ ಸಣ್ಣಪ್ಪ ನ ಮಗ ವಿನಯ್ (10) ಸಾವನಪ್ಪಿದ ದುರ್ದೈವಿ ಬಾಲಕನಾಗಿದ್ದಾನೆ.
ಮಳವಳ್ಳಿ ಪಟ್ಟಣದ ಪೇಟೆ ಬೀದಿಯ ಅಜ್ಜಿ ರತ್ನಮ್ಮ ರ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕ ಮಂಗಳವಾರ ಬೆಳಗ್ಗೆ ಕನಕಪುರ- ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದಿದ್ದು, ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಅಪಘಾತದಲ್ಲಿ ಬಾಲಕ ದುರ್ಮರಣ ಕ್ಕಿಡಾದ ಸುದ್ದಿ ಹರಡುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿ ಸರ್ಕಾರಿ ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮೃತ ಬಾಲಕನ ಸಂಬಂಧಿಕರ ರೋಧನ ಮುಗಿಲು ಮುಟ್ಟಿತ್ತು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಬಾಲಕನ ಮೃತದೇಹ ರವಾನಿಸಿದ್ದು.ಈ ಸಂಬಂಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.