ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ.
ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ ತ್ರಿವೇಣಿ ಸಂಗಮದಲ್ಲಿ ಹೆಚ್ಚು ನೀರು ಹರಿಯುತ್ತಿದೆ.
ಭಾಗಮಂಡಲ ತಲಕಾವೇರಿಗೆ ಭಕ್ತಾದಿಗಳ ಸಂಖ್ಯೆ ಇಂದು ಬೆಳಿಗ್ಗೆ ಕ್ಷಿಣಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಅಭಿವೃದ್ಧಿಪಡಿಸಲಾದ ಉದ್ಯಾನವನ ಸಂಪೂರ್ಣವಾಗಿ ಜಲಾವೃತ ವಾಗಿದೆ.
ನಾಪೋಕ್ಲು- ಭಾಗಮಂಡಲ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ನಿರ್ಮಾಣದಿಂದ ಸಂಪರ್ಕ ಕಡಿತದಿಂದ ಮುಕ್ತಿ ಸಿಕ್ಕಿದೆ.
ಜಿಲ್ಲೆಯ ನದಿಪಾತ್ರದ ನಿವಾಸಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಜಿಲ್ಲಾಡಳಿತದಿಂದ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.
ಬಂಡೀಪುರ ಉಷ್ಟ್ರೀಯ ಉದ್ಯಾನದೊಳಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವನ್ನು ರಾಜಕೀಯ ಮುಖಂಡರ ಒತ್ತಡಕ್ಕೆ…
ಅಹಮದಾಬಾದ್: ಸಂಘಟಿತ ಬ್ಯಾಟಿಂಗ್ ಮತ್ತು ಬೌಲಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಗುಜರಾತ್ ಟೈಟನ್ಸ್ 2025ರ 18 ಆವೃತ್ತಿಯ…
ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ…
ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್ ದಾಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…
‘ಏಪ್ರಿಲ್ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್.16ರಂದು…
‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ…