ಮೀರಠ್ : ಉತ್ತರ ಪ್ರದೇಶದಲ್ಲಿ ಧಾರ್ಮಿಕ ಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್‌ಗೆ ವಿದ್ಯುತ್ ಸ್ಪರ್ಶವಾದ ಕಾರಣ ಐವರು ಯಾತ್ರಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಉತ್ತರ ಪ್ರದೇಶದ ಮೀರಠ್‌ನ ಚೌಹಾನ್ ಗ್ರಾಮದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕನ್ವಾರಿಯಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್, ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಸಂಭವಿಸಿದ ದುರಂತದಲ್ಲಿ ಐದು ಮಂದಿ ಸುಟ್ಟು ಕರಕಲಾಗಿದ್ದಾರೆ.
ಹದಿನಾರು ಮಂದಿ ಯಾತ್ರಿಕರ ಗುಂಪು ಹರಿದ್ವಾರದಿಂದ ತಮ್ಮ ಸ್ವಗ್ರಾಮ ರಾಲಿ ಚೌಹಾಣ್ ಗೆ ವಾಪಸ್ಸಾಗುತ್ತಿದ್ದಾಗ ಭವಾನ್ಪುರ ಬಳಿ ಈ ದುರಂತ ಸಂಭವಿಸಿದೆ. “ಹತ್ತು ಮಂದಿ ಕನ್ವಾರಿಯಾಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಐದು ಮಂದಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಮೀರಠ್ ಜಿಲ್ಲಾಧಿಕಾರಿ ಡಿ.ಎಂ.ದೀಪಕ್ ಮೀನಾ ಹೇಳಿದ್ದಾರೆ.
ಯಾತ್ರಿಗಳ ವಾಹನದಲ್ಲಿ ಬೃಹತ್ ಸ್ಪೀಕರ್‌ಗಳ ಮೂಲಕ ಹಾಡು ಕೇಳುತ್ತಾ ಹಳ್ಳಿಯನ್ನು ಪ್ರವೇಶಿಸಿದಾಗ ವಾಹನಕ್ಕೆ ಅಚಾನಕ್ಕಾಗಿ ತೂಗಾಡುವ ಹೈ-ಟೆನ್ಷನ್ ವೈರ್ ತಗುಲಿದೆ. ಈ ವೇಳೆ ನೋಡನೋಡುತ್ತಲೇ ಒಬ್ಬರ ನಂತರ ಒಬ್ಬರು ಯಾತ್ರಿಕರು ವಿದ್ಯುತ್ ಸ್ಪರ್ಶದಿಂದ ಕುಸಿದು ಬಿದ್ದಿದ್ದಾರೆ. ಗ್ರಾಮಸ್ಥರು ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವಂತೆ ವಿದ್ಯುತ್ ಕೇಂದ್ರಕ್ಕೆ ಕರೆ ಮಾಡಿದ್ದಾರೆಯಾದರೂ ಅವರು ಬಂದು ವಿದ್ಯುತ್ ಕಡಿತ ಮಾಡುವಷ್ಟರಲ್ಲಿಯೇ ಯಾತ್ರಿಕರು ವಿದ್ಯುದಾಘಾತಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಐದು ಮಂದಿ ಸಾವನ್ನಪ್ಪಿದ್ದಾರೆ.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…