ಬಳ್ಳಾರಿ : ತಿರುಪತಿಯಲ್ಲಿ ಪ್ರಸಾದದ ರೂಪದಲ್ಲಿ ವಿತರಿಸುತ್ತಿದ್ದ ಪ್ರಸಿದ್ಧ ಲಾಡುಗಳಲ್ಲಿ ಇನ್ನುಮುಂದೆ ನಂದಿನಿ ತುಪ್ಪದ ಘಮ ಸಿಗುವುದಿಲ್ಲ. ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಕೆಎಂಎಫ್‌ನಿಂದ ನಂದಿನಿ ತುಪ್ಪದ ಖರೀದಿಯನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಲಾಡುಗಳ ತಯಾರಿಕೆಯಲ್ಲಿ ನಂದಿನಿ ತುಪ್ಪದ ಬಳಕೆಯನ್ನು ನಿಲ್ಲಿಸಿದೆ.
ಈ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಭೀಮಾನಾಯ್ಕ್, ಕೆಎಂಎಫ್ ಸಲ್ಲಿಸಿರುವ ತುಪ್ಪದ ದರ ಪ್ರಸ್ತಾವನೆಯನ್ನು ಟಿಟಿಡಿ ಒಪ್ಪಿಕೊಂಡಿಲ್ಲ. ಅದರ ಬದಲಾಗಿ ಬೇರೆ ಕಂಪನಿಯಿಂದ ತುಪ್ಪ ಖರೀದಿಸಲು ಟಿಟಿಡಿ ಮುಂದಾಗಿದೆ ಎಂದಿದ್ದಾರೆ. ನಂದಿನಿ ತುಪ್ಪದಿಂದ ತಿರುಪತಿ ದೇವಸ್ಥಾನದಲ್ಲಿನ ಲಾಡುಗಳು ರುಚಿಯಾಗಿವೆ ಎಂದು ಟಿಟಿಡಿ ಹಲವು ಬಾರಿ ಹೇಳಿತ್ತು. ಹೀಗಿದ್ದರೂ ಸಹ ಕೆಎಂಎಫ್ ಮತ್ತು ಟಿಟಿಡಿ ನಡುವಿನ ತುಪ್ಪದ ಒಪ್ಪಂದಕ್ಕೆ ಅಂತ್ಯ ಬಿದ್ದಿದೆ.
ಆಗಸ್ಟ್ 1 ರಿಂದ ಹಾಲಿನ ಬೆಲೆ ಹೆಚ್ಚಾಗಿರುವುದರಿಂದ ಸಹಜವಾಗಿಯೇ ತುಪ್ಪಕ್ಕೆ ಹೆಚ್ಚಿನ ಬೆಲೆ ನೀಡುವಂತೆ ಬೇಡಿಕೆ ಇಟ್ಟಿದ್ದೇವು. ಆದರೆ, ಟಿಟಿಡಿ ತುಪ್ಪ ಪೂರೈಸಲು ಇ-ಪ್ರೊಕ್ಯೂರ್‌ಮೆಂಟ್ ಸೈಟ್ ಮೂಲಕ ಕಡಿಮೆ ಬೆಲೆಯನ್ನು ನಮೂದಿಸಿದ ಕಂಪನಿಯನ್ನು ಆಯ್ಕೆ ಮಾಡಿದೆ. ಗುಣಮಟ್ಟದ ಕಾರಣದಿಂದ ನಂದಿನಿ ತುಪ್ಪ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಹೊಂದಿದೆ. ಕಡಿಮೆ ಬೆಲೆಯಲ್ಲಿ ಬಿಡ್ ಮಾಡುವ ಕಂಪನಿ ತುಪ್ಪದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದು ಸ್ಪಷ್ಟ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.
ಅದಲ್ಲದೇ, ರುಚಿ ರುಚಿಯಾದ ಲಾಡು ತಯಾರಿಕೆಯಲ್ಲಿ ನಂದಿನಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…