BREAKING NEWS

ಟಿಟಿಡಿ ಕೆಎಂಎಫ್‌ ತುಪ್ಪದ ಒಪ್ಪಂದ ಅಂತ್ಯ : ಇನ್ನುಮುಂದೆ ತಿರುಪತಿ ಲಾಡುಗಳಲ್ಲಿರಲ್ಲ ನಂದಿನಿ ತುಪ್ಪದ ಸ್ವಾದ

ಬಳ್ಳಾರಿ : ತಿರುಪತಿಯಲ್ಲಿ ಪ್ರಸಾದದ ರೂಪದಲ್ಲಿ ವಿತರಿಸುತ್ತಿದ್ದ ಪ್ರಸಿದ್ಧ ಲಾಡುಗಳಲ್ಲಿ ಇನ್ನುಮುಂದೆ ನಂದಿನಿ ತುಪ್ಪದ ಘಮ ಸಿಗುವುದಿಲ್ಲ. ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಕೆಎಂಎಫ್‌ನಿಂದ ನಂದಿನಿ ತುಪ್ಪದ ಖರೀದಿಯನ್ನು ಸ್ಥಗಿತಗೊಳಿಸಿದೆ. ಈ ಮೂಲಕ ಲಾಡುಗಳ ತಯಾರಿಕೆಯಲ್ಲಿ ನಂದಿನಿ ತುಪ್ಪದ ಬಳಕೆಯನ್ನು ನಿಲ್ಲಿಸಿದೆ.

ಈ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿರುವ ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಭೀಮಾನಾಯ್ಕ್‌, ಕೆಎಂಎಫ್ ಸಲ್ಲಿಸಿರುವ ತುಪ್ಪದ ದರ ಪ್ರಸ್ತಾವನೆಯನ್ನು ಟಿಟಿಡಿ ಒಪ್ಪಿಕೊಂಡಿಲ್ಲ. ಅದರ ಬದಲಾಗಿ ಬೇರೆ ಕಂಪನಿಯಿಂದ ತುಪ್ಪ ಖರೀದಿಸಲು ಟಿಟಿಡಿ ಮುಂದಾಗಿದೆ ಎಂದಿದ್ದಾರೆ. ನಂದಿನಿ ತುಪ್ಪದಿಂದ ತಿರುಪತಿ ದೇವಸ್ಥಾನದಲ್ಲಿನ ಲಾಡುಗಳು ರುಚಿಯಾಗಿವೆ ಎಂದು ಟಿಟಿಡಿ ಹಲವು ಬಾರಿ ಹೇಳಿತ್ತು. ಹೀಗಿದ್ದರೂ ಸಹ ಕೆಎಂಎಫ್‌ ಮತ್ತು ಟಿಟಿಡಿ ನಡುವಿನ ತುಪ್ಪದ ಒಪ್ಪಂದಕ್ಕೆ ಅಂತ್ಯ ಬಿದ್ದಿದೆ.

ಆಗಸ್ಟ್ 1 ರಿಂದ ಹಾಲಿನ ಬೆಲೆ ಹೆಚ್ಚಾಗಿರುವುದರಿಂದ ಸಹಜವಾಗಿಯೇ ತುಪ್ಪಕ್ಕೆ ಹೆಚ್ಚಿನ ಬೆಲೆ ನೀಡುವಂತೆ ಬೇಡಿಕೆ ಇಟ್ಟಿದ್ದೇವು. ಆದರೆ, ಟಿಟಿಡಿ ತುಪ್ಪ ಪೂರೈಸಲು ಇ-ಪ್ರೊಕ್ಯೂರ್‌ಮೆಂಟ್ ಸೈಟ್ ಮೂಲಕ ಕಡಿಮೆ ಬೆಲೆಯನ್ನು ನಮೂದಿಸಿದ ಕಂಪನಿಯನ್ನು ಆಯ್ಕೆ ಮಾಡಿದೆ. ಗುಣಮಟ್ಟದ ಕಾರಣದಿಂದ ನಂದಿನಿ ತುಪ್ಪ ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಹೊಂದಿದೆ. ಕಡಿಮೆ ಬೆಲೆಯಲ್ಲಿ ಬಿಡ್‌ ಮಾಡುವ ಕಂಪನಿ ತುಪ್ಪದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದು ಸ್ಪಷ್ಟ ಎಂಬುದು ಗೊತ್ತಾಗುತ್ತದೆ ಎಂದಿದ್ದಾರೆ.

ಅದಲ್ಲದೇ, ರುಚಿ ರುಚಿಯಾದ ಲಾಡು ತಯಾರಿಕೆಯಲ್ಲಿ ನಂದಿನಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್‌ ಹೇಳಿದ್ದಾರೆ.

lokesh

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

1 hour ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

1 hour ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago