ತುಮಕೂರು: ಗುಬ್ಬಿ ತಾಲೂಕಿನ ಇಸ್ಲಾಂಪುರ ಗ್ರಾಮದ ಬಳಿ ಹೇಮಾವತಿ ನಾಲೆಗೆ ಬಿದ್ದು ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ.
ಮೃತರನ್ನು 9 ವರ್ಷದ ಮಿಸ್ಬಾ ಬಾನು ಮತ್ತು 7 ವರ್ಷದ ಮಹಮ್ಮದ್ ನಯೀಮ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಬಾಲಕ 10 ವರ್ಷದ ಮಹ್ಮದ್ ಬಿಲಾಲ್ ನನ್ನು ರಕ್ಷಿಸಲಾಗಿದೆ.
ಈ ಮೂವರು ಮಕ್ಕಳು ನಾಲೆಗೆ ಬಿದ್ದಿದ್ದರು. ಇದನ್ನು ಗಮನಿಸಿದ ಯುವಕನೊಬ್ಬ ಕೂಡಲೇ ನಾಲೆಗೆ ಹಾರಿ ಮಹ್ಮದ್ ಬಿಲಾಲ್‌ನನ್ನು ರಕ್ಷಣೆ ಮಾಡಿದ್ದಾನೆ. ಆದರೆ ಮತ್ತಿಬ್ಬರು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು.
ನಾಲೆಯಲ್ಲಿ ಕೊಚ್ಚಿ ಹೋಗಿರುವ ಮಿಸ್ಬಾ ಬಾನು ಮತ್ತು ಮಹಮ್ಮದ್ ನಯೀಮ್ ಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…