ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಕಾಂಗ್ರೆಸ್ ಮುಖಂಡ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A, 120b, 505(2), 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿಸಿಸಿ ವಕ್ತಾರ ರಮೇಶ್ ಬಾಬು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅಮಿತ್ ಮಾಳವೀಯಾ ವಿರುದ್ಧ ದೂರು ನೀಡಿದ್ದರು.
ಕಾಂಗ್ರೆಸ್ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನಿಮೇಟೆಡ್ ವಿಡಿಯೋವನ್ನು ಅಮಿತ್ ಮಾಳವೀಯ ಬಿಡುಗಡೆ ಮಾಡಿದ್ದರು. ಈ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಹಾಗೂ ಚಂಡೀಗಢ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ ವಿರುದ್ಧವೂ ದೂರು ದಾಖಲಾಗಿತ್ತು.
ಜೂನ್ 17ರಂದು ಅಮಿತ್ ಮಾಳವಿಯಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಅನಿಮೇಟೆಡ್ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಆ ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲಾ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಹೇಳಲಾಗಿತ್ತು. ಇದು ಕಾಂಗ್ರೆಸ್ ನಾಯಕರನ್ನು ಕೆರಳಿಸಿದ್ದು, ಬಿಜೆಪಿ ನಾಯಕರ ವಿರುದ್ಧ ಜೂನ್ 19ರಂದು ಕಾಂಗ್ರೆಸ್ ನಾಯಕರು ದೂರು ನೀಡಿದ್ದರು.
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…