Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಭಯೋತ್ಪಾದಕರ ಗುಂಡೇಟಿಗೆ ಸೇನಾಧಿಕಾರಿಗಳಿಬ್ಬರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ.

ಭಯೋತ್ಪಾದಕರ ಗುಂಡೇಟಿಗೆ ಭಾರತೀಯ ಯೋಧ ಕರ್ನಲ್ ಮನ್‍ಪ್ರೀತ್ ಸಿಂಗ್ ಹಾಗೂ ಮೇಜರ್ ಆಶಿಶ್ ಧೋಂಚಕ್ ಹುತಾತ್ಮರಾಗಿದ್ದಾರೆ. ಈ ಕುರಿತು ಜನರಲ್ ವಿಕೆ ಸಿಂಗ್ ಟ್ವೀಟ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಕರ್ನಲ್ ಮನ್‍ಪ್ರೀತ್ ಸಿಂಗ್ ಅವರು 19 ರಾಷ್ಟ್ರೀಯ ರೈಫಲ್ಸ್ (19 ಖಖ) ಘಟಕದ ಕಮಾಂಡಿಂಗ್ ಅಧಿಕಾರಿಯಾಗಿದ್ದರು. ಅನಂತನಾಗ್‍ನ ಕೋಕರ್‍ನಾಗ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರು ನಡೆಸಿದ ಭಾರೀ ಗುಂಡಿನ ದಾಳಿಯ ನಡುವೆಯೇ ಅಧಿಕಾರಿಯ ಮೃತದೇಹವನ್ನು ಹೊರತೆಗೆಯಲಾಗಿದೆ.

ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಸೇನೆಯ 15 ಕಾಪ್ರ್ಸ್ ಕಮಾಂಡರ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಎನ್‍ಕೌಂಟರ್ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಮತ್ತು ಮೃತದೇಹಗಳ ತೆರವು ಕಾರ್ಯದ ಮೇಲ್ವಿಚಾರಣೆ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ