ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ.
ಭಯೋತ್ಪಾದಕರ ಗುಂಡೇಟಿಗೆ ಭಾರತೀಯ ಯೋಧ ಕರ್ನಲ್ ಮನ್‍ಪ್ರೀತ್ ಸಿಂಗ್ ಹಾಗೂ ಮೇಜರ್ ಆಶಿಶ್ ಧೋಂಚಕ್ ಹುತಾತ್ಮರಾಗಿದ್ದಾರೆ. ಈ ಕುರಿತು ಜನರಲ್ ವಿಕೆ ಸಿಂಗ್ ಟ್ವೀಟ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ಕರ್ನಲ್ ಮನ್‍ಪ್ರೀತ್ ಸಿಂಗ್ ಅವರು 19 ರಾಷ್ಟ್ರೀಯ ರೈಫಲ್ಸ್ (19 ಖಖ) ಘಟಕದ ಕಮಾಂಡಿಂಗ್ ಅಧಿಕಾರಿಯಾಗಿದ್ದರು. ಅನಂತನಾಗ್‍ನ ಕೋಕರ್‍ನಾಗ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭಯೋತ್ಪಾದಕರು ನಡೆಸಿದ ಭಾರೀ ಗುಂಡಿನ ದಾಳಿಯ ನಡುವೆಯೇ ಅಧಿಕಾರಿಯ ಮೃತದೇಹವನ್ನು ಹೊರತೆಗೆಯಲಾಗಿದೆ.
ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಸೇನೆಯ 15 ಕಾಪ್ರ್ಸ್ ಕಮಾಂಡರ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಎನ್‍ಕೌಂಟರ್ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಮತ್ತು ಮೃತದೇಹಗಳ ತೆರವು ಕಾರ್ಯದ ಮೇಲ್ವಿಚಾರಣೆ ಮಾಡಿದ್ದಾರೆ.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…