ಮಂಡ್ಯ : ಕಾವೇರಿ ನೀರಿಗಾಗಿ ನಾಡಿನ ಹಿತರಕ್ಷಣೆಗೆ ಹೋರಾಡುತ್ತಿರುವ ರೈತರು ಮತ್ತು ಸರ್ಕಾರದ ಹೋರಾಟಕ್ಕೆ ಮಂಡ್ಯ ಜಿಲ್ಲೆಯ ಇಬ್ಬರೂ ರೈತರು ಕೈ ಜೋಡಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಮೂಲಕ ಕಾನೂನು ಸಂಘರ್ಷಕ್ಕೆ ಇಳಿದಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ತರಿಕೇರೆ ಗ್ರಾಮದ ಪ್ರಗತಿಪರ ರೈತ ಕೆ ಕೆಂಪರಾಜು ಮತ್ತು ಪಾಂಡವಪುರದ ನಿವೃತ ಯೋಧ ಮತ್ತು ರೈತ ಆರ್ ಪಿ ರವಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಮೂಲ ದಾವೆಯಲ್ಲಿ ತಮ್ಮನ್ನು ಪಕ್ಷಗಾರನ್ನಾಗಿಸಿ ರೈತರ ಅಹವಾಲು ಆಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಈಗಾಗಲೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ರೈತಸಂಘದ ಪರವಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು ಇದೀಗ ಇಬ್ಬರೂ ರೈತರು ಸಲ್ಲಿಸಿರುವ ಅರ್ಜಿಗಳು ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು ಸರ್ಕಾರದ ಜೊತೆ ರೈತರು ಮತ್ತು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಪರಿಸ್ಥಿತಿ ಯನ್ನು ನ್ಯಾಯಾಲಯದ ಗಮನಕ್ಕೆ ತರಲು ಅವಕಾಶವಾಗಲಿದೆ.
ಕಾನೂನು ಸಂಘರ್ಷಕ್ಕೆ ಮಂಡ್ಯ ರೈತರು ಮುಂದಾಗುವ ಮೂಲಕ ತಮ್ಮ ಹೋರಟ ಕೇವಲ ಸಾಂಕೇತಿಕವಾಗಿರದೆ ರೈತರ ಹಿತರಕ್ಷಣೆಗೆ ನೆರೆಯ ರಾಜ್ಯದ ಕಾನೂನು ಹೋರಟಕ್ಕೆ ಪ್ರತಿ ಸವಾಲು ಎಸೆಯುವ ಮೂಲಕ ಗಮನ ಸೆಳೆದಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…