BREAKING NEWS

ಹಮಾಸ್ ಉಗ್ರರಿಂದ ಇಬ್ಬರು ಒತ್ತೆಯಾಳುಗಳ ಬಿಡುಗಡೆ

ಟೆಲ್ ಅವೀವ್ : ಇಸ್ರೇಲ್‍ನಿಂದ ಹಮಾಸ್ ಉಗ್ರರು ಅಪಹರಿಸಿದ್ದ 200 ಒತ್ತೆಯಾಳುಗಳ ಪೈಕಿ ಇಬ್ಬರು ಅಮೆರಿಕದ ಪ್ರಜೆಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನೂ ಹೆಚ್ಚಿನ ಜನರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ.

ಹಮಾಸ್ ಉಗ್ರರ ವಶದಲ್ಲಿದ್ದ ಅಮೆರಿಕ ಮೂಲದ ಜುಡಿತ್ ತೈ ರಾನನ್ ಮತ್ತು ಅವರ ಮಗಳು ನಟಾಲಿ ಶೋಷನಾ ರಾನನ್ ತಡರಾತ್ರಿ ಇಸ್ರೇಲ್‍ಗೆ ಮರಳಿದ್ದಾರೆ. ಅವರ ಬಿಡುಗಡೆ ಬಳಿಕ ಅಮೆರಿಕ ಅಧ್ಯಕ್ಷ್ಯ ಜೋ ಬೈಡನ್ ಅವರ ಬಳಿ ಫೋನ್‍ನಲ್ಲಿ ಮಾತಾಡಿದ್ದಾರೆ. ಈ ವಿಷಯ ಬಹಳ ಸಂತೋಷ ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಒತ್ತೆಯಾಳುಗಳನ್ನು ಮುಕ್ತಗೊಳಿಸಲು ಕತಾರ್ ಮತ್ತು ಈಜಿಪ್ಟ್‌ನೊಂದಿಗೆ ಮಾತುಕತೆ ನಡೆಸಿ ಒತ್ತಡ ಹಾಕಲಾಗುತ್ತಿದೆ. ಇದರಿಂದ ಹೆಚ್ಚಿನ ಜನರ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇದು ಸಾಂಕೇತಿಕವಾಗಿ ಆದ ಬಿಡುಗಡೆ ಎಂದು ಇಸ್ರೇಲ್ ಸರ್ಕಾರ ಹೇಳಿಕೊಂಡಿದೆ.

ಅಕ್ಟೋಬರ್ 7 ರಂದು ಇಸ್ರೇಲ್-ಗಾಜಾ ಗಡಿಯ ಸಮೀಪವಿರುವ ನಹಾಲ್ ಓಜ್ ಕಿಬ್ಬುಟ್ಜ್‍ನಿಂದ ಹಮಾಸ್ ಉಗ್ರರು ಅವರನ್ನು ಅಪಹರಿಸಿದ್ದರು. ಅಪಹರಿಸಲ್ಪಟ್ಟವರಲ್ಲಿ ಹೆಚ್ಚಿನವರು ಇನ್ನೂ ಜೀವಂತವಾಗಿದ್ದಾರೆ. 20 ಕ್ಕೂ ಹೆಚ್ಚು ಒತ್ತೆಯಾಳುಗಳು ಅಪ್ರಾಪ್ತರಾಗಿದ್ದಾರೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.

lokesh

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago