ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುವ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಮೂಲತಃ ಹಾಸನ ನಿವಾಸಿಯಾದ ಸಧ್ಯ ಪಡುವಾರಹಳ್ಳಿಯಲ್ಲಿ ವಾಸಿಸುತ್ತಿದ್ದ ಇಂದ್ರಾಂಣಿ ಎಂಬವರ ಮಗ ಹೃತಿಕ್ ಧರಣಿ(೨೪) ಹಾಗೂ ಮೂಲತಃ ಬೆಟ್ಟದಪುರ ತಾಲ್ಲೂಕು ಕೌನಳ್ಳಿ ನಿವಾಸಿಯಾದ ಸಧ್ಯ ಹಿನಕಲ್‌ನಲ್ಲಿ ವಾಸಿಸುತ್ತಿದ್ದ ಶಕುಂತ ಎಂಬವರ ಮಗ ಕೆ.ಎನ್.ಸಂಪತ್(೧೯) ಎಂಬವರೇ ಅಪಘಾತದಲ್ಲಿ ಮೃತಪಟ್ಟವರು.
ಹೃತಿಕ್ ಹಾಗೂ ಸಂಪತ್ ಎಂಬವರು ನಗರದ ಹುಣಸೂರು ರಸ್ತೆಯಲ್ಲರುವ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ದ್ವಿತೀಯ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದರು. ಹೊಸ ವರ್ಷಾಚರಣೆ ಸಂಬಂದ ಇಬ್ಬರೂ ಕೂಡ ಭಾನುವಾರ ನಗರದೆಲ್ಲೆಡೆ ರಾತ್ರಿ ೨ ಗಂಟೆ ವರೆಗೂ ಸುತ್ತಾಡಿದ್ದಾರೆ.
ಅಂತಿಮವಾಗಿ ರಾತ್ರಿ ೩ ಗಂಟೆ ವೇಳೆಯಲ್ಲಿ ಮನೆಗೆ ತೆರಳಲು ತೀರ್ಮಾನಿಸಿದ್ದಾರೆ. ಸಂಪತ್ ಮನೆ ಹಿನಕಲ್‌ನಲ್ಲಿ ಇದ್ದ ಕಾರಣ ಆತನನ್ನು ಮನೆಗೆ ಬಿಡಲು ಹೃತಿಕ್ ತನ್ನ ಬೈಕ್‌ನಲ್ಲಿ ಕರೆದೊಯ್ದಿದ್ದಾನೆ. ಇದೇ ವೇಳೆ ಜೆಸಿ ಕಾಲೆಜಿಗೆ ತೆರಳುವ ರಸ್ತೆಯ ತಿರುವಿನಲ್ಲಿ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ.
ಇದರಿಂದ ಇಬ್ಬರಿಗೂ ತಲೆಯ ಭಾಗಕ್ಕೆ ತೀವ್ರ ಪೆಟ್ಟಾದ ಕಾರಣ ಇಬ್ಬರು ಕೂಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಚಾರ ತಿಳಿದ ವಿವಿಪುರಂ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಲವ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಕೆಆರ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.
ಹೃತಿಕ್ ಅವರ ತಂದೆ ಮೃತಪಟ್ಟಿದ್ದು, ತಾಯಿ ಇಂದ್ರಾಣಿ ಅವರು ಶಿಕ್ಷಿಕಿಯಾ ಗಿದ್ದಾರೆ. ಮಗನ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಓದಿಸುತ್ತಿದ್ದರ
ಇನ್ನು ಸಂಪತ್ ತಂದೆ ಕೂಡ ಮೃತಪಟ್ಟಿದ್ದು, ಆತನ ತಾಯಿ ಶಕುಂತಲ ಅವರು ಊರಿನಲ್ಲಿ ಇದ್ದುಕೊಂಡೇ ಮಗನ ವಿದ್ಯಾಭ್ಸಾಸಕ್ಕೆ ನೆರವಾಗಿದ್ದರು.
ಕುಟುಂಬಸ್ತರ ಆಕ್ರಂದನ: ಹೃತಿಕ್ ಹಾಗೂ ಸಂಪತ್ ಅವರ ಸಾವಿನ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಕುಟುಂಬಸ್ತರ ಆಕ್ರಂದನ ಮುಗಿಲುಮುಟ್ಟಿತು.ಸೆಂಟ್ ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳು ಕೂಡ ಆಗಮಿಸಿ ಸ್ನೇಹಿತರ ಸಾವಿಗೆ ಮಮ್ಮಲ ಮರುಗಿದರು. ಈ ಸಂಬಂದ ವಿವಿಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…