BREAKING NEWS

ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಸಾಮಾನ್ಯ ಜನರಿಗೆ ಸಿಕ್ಕಿದ್ದು ಕೇವಲ “ಸುಳ್ಳು” ಮತ್ತು “ಜುಮ್ಲಾ” ಗಳು ಮಾತ್ರ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಜನಸಾಮಾನ್ಯರಿಗೆ ವಿಮಾನ ಪ್ರಯಾಣವನ್ನು ಕೈಗೆಟುಕುವಂತೆ ಮಾಡಲು 2016 ರ ಅಕ್ಟೋಬರ್ 21 ರಂದು ಉಡಾನ್ ಹೆಸರಿನಲ್ಲಿ ಪ್ರಾದೇಶಿಕ ವಿಮಾನಯಾನ ಸಂಪರ್ಕ ಯೋಜನೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿತು.

ಚಪ್ಪಲಿ ಧರಿಸಿದವರಿಗೆ ವಿಮಾನದಲ್ಲಿ ಪ್ರಯಾಣಿಸಲು ಅನುವು ಮಾಡಿಕೊಡುವ ಮೋದಿ ಸರ್ಕಾರದ ಭರವಸೆ “ಅವರ ಎಲ್ಲಾ ಭರವಸೆಗಳಂತೆ” ಇದು ಸಹ ಈಡೇರಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದಾರೆ.

“ಇದನ್ನು ನಾವು ಹೇಳುತ್ತಿಲ್ಲ, ಸಿಎಜಿ ವರದಿಯೇ ಇದನ್ನು ಹೇಳುತ್ತಿದೆ! ಯೋಜನೆ(ಉಡಾನ್) ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಲಿಲ್ಲ. ವಿಮಾನಯಾನ ಸಂಸ್ಥೆಗಳ ಸ್ವತಂತ್ರ ಲೆಕ್ಕಪರಿಶೋಧನೆ ಕೂಡ ಮಾಡಲಾಗಿಲ್ಲ. ಹೆಚ್ಚು ಪ್ರಚಾರ ಮಾಡಿದ ಹೆಲಿಕಾಪ್ಟರ್ ಸೇವೆಗಳು ಸಹ ಸ್ಥಗಿತಗೊಂಡಿವೆ” ಎಂದು ಖರ್ಗೆ  ಆರೋಪಿಸಿದ್ದಾರೆ.

“ಉಡಾನ್’ ಸಿಗಲಿಲ್ಲ, ಜನತೆಗೆ ಸಿಕ್ಕಿದ್ದು ಕೇವಲ ಸುಳ್ಳು ಭರವಸೆ ಮತ್ತು ಜುಮ್ಲಾಗಳು! ಅಂತಹ ಅಸಮರ್ಥ ಸರ್ಕಾರವನ್ನು ಭಾರತ ಈಗ ಕ್ಷಮಿಸುವುದಿಲ್ಲ!” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

andolanait

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

1 hour ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

2 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

8 hours ago