ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ವಿಡಿಯೋ ಪ್ರಕರಣದ ವಿಚಾರವಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಾಲೇಜಿನ ವಾಶ್‌ರೂಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದರು ಎನ್ನಲಾದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.
ಜುಲೈ 18ರಂದು ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಚಾರ್ಯರು ಅಮಾನತು ಮಾಡಿದ್ದರು. ಪ್ರಕರಣ ಭಾರೀ ಸದ್ದು ಮಾಡಿದ್ದರಿಂದ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಜುಲೈ 26ರಂದು ಸುಮೊಟೋ ಪ್ರಕರಣವನ್ನು ದಾಖಲಿಸಿದ್ದರು. ಅದಾದ ಬಳಿಕ ತನಿಖಾಧಿಕಾರಿಯನ್ನು ಕೂಡ ಬದಲಾಯಿಸಿ, ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.
ಇನ್ನು, ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗವು ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಎರಡು ದಿನ ಭೇಟಿ ನೀಡಿ ತನಿಖೆ ನಡೆಸಿದ್ದರು. ಆದರೆ, ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಹುನ್ನಾರ ನಡೆಸುತ್ತಿದೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಜೊತೆಗೆ ಪ್ರಕರಣವನ್ನು ಎಸ್‌ಐಟಿಗೆ ವಹಿಸುವಂತೆ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಸರ್ಕಾರವನ್ನು ಆಗ್ರಹಿಸಿದ್ದರು.
ಈ ಬಗ್ಗೆ ಕರಾವಳಿಯ ಬಿಜೆಪಿ ಶಾಸಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೂಡ ಮನವಿ ಮಾಡಿದ್ದರು. ಎಬಿವಿಪಿ ಹಾಗೂ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಇದರ ನಡುವೆಯೇ ರಾಜ್ಯ ಸರ್ಕಾರ ಸೋಮವಾರ ಮಹತ್ವದ ಆದೇಶ ಹೊರಡಿಸಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದೆ. ಈ ಹಿನ್ನೆಲೆ ಸಿಐಡಿ ಪೊಲೀಸ್ ತಂಡವು ಮಂಗಳವಾರ ಉಡುಪಿಗೆ ಆಗಮಿಸಿ, ಎಸ್‌ಪಿ ಹಾಗೂ ತನಿಖಾಧಿಕಾರಿ ಜೊತೆ ಚರ್ಚಿಸಿ ಎಲ್ಲ ದಾಖಲೆಗಳನ್ನು ಪಡೆದುಕೊಳ್ಳಲಿದೆ ಎಂದು ಹೇಳಲಾಗಿದೆ.
ಏನಿದು ಉಡುಪಿ ವಿಡಿಯೋ ಪ್ರಕರಣ? : ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿಯ ವಿಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ ಎಂದು ಹೇಳಲಾಗಿದೆ. ಜುಲೈ 18ರಂದು ಘಟನೆ ನಡೆದಿದ್ದು, ಕಾಲೇಜಿನಿಂದ ವಿದ್ಯಾರ್ಥಿನಿಯರನ್ನು ಅಮಾನತು ಕೂಡ ಮಾಡಲಾಗಿತ್ತು. ಅದಾದ ಬಳಿಕ ಭಾರೀ ಪ್ರತಿಭಟನೆ ಹಿನ್ನೆಲೆ ಜುಲೈ 26ರಂದು ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣವನ್ನು ದಾಖಲಿಸಲಾಗಿತ್ತು. ಆ ನಂತರ ಮೂವರು ವಿದ್ಯಾರ್ಥಿನಿರು ಜಾಮೀನನ್ನು ಕೂಡ ಪಡೆದಿದ್ದರು.
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…